
ಕಡಬ : ಬಲೂನ್ ಕಟ್ಟಿಕೊಂಡು ಸೇತುವೆಯಿಂದ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ – ಆಲಂಕಾರು ಮೂರ್ತೆದಾರದ ಸೇವಾ ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ ಪೂಜಾರಿ ದುರ್ಮರಣ
- ಕರಾವಳಿ
- May 26, 2023
- No Comment
- 134
ನ್ಯೂಸ್ ಆ್ಯರೋ : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.

ಮೃತ ವ್ಯಕ್ತಿಯನ್ನು ಆಲಂಕಾರಿನ ದುರ್ಗಾಂಬಾ ಜನರಲ್ ಸ್ಟೋರ್ ನ ಮಾಲಕ, ಮೂರ್ತೆದಾರದ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಸದ್ಯ ನಿರ್ದೇಶಕರಾಗಿದ್ದ ಚಂದ್ರಶೇಖರ ಪೂಜಾರಿ ಎಂದು ಗುರುತಿಸಲಾಗಿದೆ.
ಚಂದ್ರಶೇಖರ ಅವರು ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿದ್ದು ನಂತರ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸದ್ಯ ಮೃತದೇಹವನ್ನು ಮೇಲೆತ್ತಲಾಗಿದ್ದು, ಕಡಬದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಮೃತರು ಒಬ್ಬ ಧಾರ್ಮಿಕ ಮುಂದಾಳುವಾಗಿದ್ದು, ಬಿಲ್ಲವ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯಕ್ಷಗಾನ ತಾಳಮದ್ದಲೆಗಳಲ್ಲಿ ಅರ್ಥಧಾರಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.