Mangalore : ಮತ್ತೊಂದು ನೈತಿಕ ಪೋಲಿಸ್ ಗಿರಿ ಪ್ರಕರಣ – ಸ್ನೇಹಿತರ ಜೊತೆ ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ಆರೋಪ, ಇಬ್ಬರ ಬಂಧನ

Mangalore : ಮತ್ತೊಂದು ನೈತಿಕ ಪೋಲಿಸ್ ಗಿರಿ ಪ್ರಕರಣ – ಸ್ನೇಹಿತರ ಜೊತೆ ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ಆರೋಪ, ಇಬ್ಬರ ಬಂಧನ

ನ್ಯೂಸ್ ಆ್ಯರೋ : ಕರಾವಳಿ ನಗರಿ ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೋಲಿಸ್ ಗಿರಿ ಪ್ರಕರಣ ನಡೆದಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರನ್ನು ಅಳಪೆಯ ದೀಕ್ಷಿತ್ ಅಲಿಯಾಸ್ ದೀಕ್ಷಿತ್ ಅಳಪೆ (32) ಮತ್ತು ‌ಅಳಪೆ ಬಜಾಲ್ ನ ಲಾಯ್ಡ್ ಪಿಂಟೋ (32) ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ
ದಿನಾಂಕ 21.07.2023 ರಂದು ಮಂಗಳೂರಿನ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಬೀಚ್ ಗೆ ಹೋಗಿ ವಾಪಾಸ್ಸು ಬರುತ್ತಿದ್ದರು.

ಈ ವೇಳೆ ಅವರನ್ನು ಹಿಂಬಾಲಿಸಿಕೊಂಡು ಬಂದ ಇಬ್ಬರು ಬಿಜೈ ಕಾಪಿಕಾಡ್ ನ 7 ನೇ ಕ್ರಾಸ್ ನಲ್ಲಿ ವಿದ್ಯಾರ್ಥಿನಿಯರನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂದು‌ ಆರೋಪಿಸಲಾಗಿದೆ.

ಈ ಘಟನೆಯನ್ನು ಆಧರಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಘನ ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣದ ತನಿಖೆ ಮುಂದುರೆಸಲಾಗಿದೆ ಎಂದು ಪೋಲಿಸ್ ಪ್ರಕಟಣೆಯಲ್ಲಿ‌ ತಿಳಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *