ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು – ಗೆಳೆಯನಿಗೆ ಅಂಗಡಿ ಹಾಕಿಸಿಕೊಡುವುದಾಗಿ ವಂಚನೆ, ಲಕ್ಷ ಲಕ್ಷ ಲೂಟಿ : ಅತ್ಯಾಚಾರ ಕೇಸ್ ನ ಬೆದರಿಕೆ..!!

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು – ಗೆಳೆಯನಿಗೆ ಅಂಗಡಿ ಹಾಕಿಸಿಕೊಡುವುದಾಗಿ ವಂಚನೆ, ಲಕ್ಷ ಲಕ್ಷ ಲೂಟಿ : ಅತ್ಯಾಚಾರ ಕೇಸ್ ನ ಬೆದರಿಕೆ..!!

ನ್ಯೂಸ್ ಆ್ಯರೋ‌ : ಎಂಎಲ್ಎ ಟಿಕೆಟ್ ಕೊಡಿಸೋದಾಗಿ ಐದು ಕೋಟಿ ರೂಪಾಯಿ ವಂಚನೆ ಪ್ರಕರಣ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಹಣ ವಂಚನೆ ಪ್ರಕರಣ ದಾಖಲಾಗಿದೆ‌‌.

ಕೋಟ ಪೋಲಿಸ್ ಠಾಣೆಯಲ್ಲಿ ಚೈತ್ರಾ ಗೆಳೆಯನೊಬ್ಬನಿಂದಲೇ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಐದು ಲಕ್ಷ ರೂಪಾಯಿ ವಂಚಿಸಿ ಬಳಿಕ ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಲಾಗಿದೆ.

ಆರೋಪಿ ಚೈತ್ರಾ ಕುಂದಾಪುರ 2015 ರಲ್ಲಿ ಸುದಿನ ಎಂಬವರಿಗೆ ಪರಿಚಯವಾಗಿದ್ದು, ತಾನು ಬಿಜೆಪಿ ಪಕ್ಷದಲ್ಲಿ, ಉನ್ನತ ಸ್ಥಾನದಲ್ಲಿ, ಹಲವು ಮಂತ್ರಿಗಳು, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ನಂಬಿಸಿದ್ದಳು ಎನ್ನಲಾಗಿದೆ.

ಬಳಿಕ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವುದಾಗಿ ಸುದಿನ ಅವರಿಂದ 2018 ರಿಂದ 2022 (3) ರವರೆಗೆ 5 ಲಕ್ಷ ಹಣವನ್ನು ಪಡೆದಿದ್ದಳು. ಆ ನಂತರ ಪ್ರತಿ ಬಾರಿ ಅಂಗಡಿ ಹಾಕುವ ಬಗ್ಗೆ ಸುದಿನಾ ಅವರು ಕೇಳಿದಾಗ ಆರೋಪಿ ಚೈತ್ರಾ ದಿನಗಳನ್ನು ಮುಂದೂಡುತ್ತಾ ಹಾಗೂ ಇನ್ನಷ್ಟು ಹಣ ಬೇಡಿಕೆ ಇಟ್ಟಿದ್ದಳು ಎನ್ನಲಾಗಿದೆ.

ಇದರಿಂದ ಅನುಮಾನಗೊಂಡು ಸುದಿನ ಅವರು ಅಂಗಡಿಯನ್ನು ಹಾಕಿ ಕೊಡುವಂತೆ ಕೇಳಿಕೊಂಡಾಗ ಆರೋಪಿ ಚೈತ್ರಾ ಅತ್ಯಾಚಾರ ಪ್ರಕರಣವನ್ನು ದಾಖಲಿಸುವುದಾಗಿ ಮತ್ತು ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಒಡ್ಡಿದ್ದಾಳೆ ಎಂದು ಆರೋಪಿಸಲಾಗಿದೆ.

ದೂರಿಗೆ ಸಂಬಂಧಿಸಿದಂತೆ ಕೋಟ ಪೋಲಿಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಅ.ಕ್ರ.ಸಂ. 180/2023 ರಂತೆ IPC 1860 (506,420,417) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related post

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ –…

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ…
ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್…

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ…

Leave a Reply

Your email address will not be published. Required fields are marked *