Mangalore : MDMA ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ – ಆರು‌ ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ..!

Mangalore : MDMA ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ – ಆರು‌ ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ..!

ನ್ಯೂಸ್ ಆ್ಯರೋ : ಮಾದಕ ವಸ್ತುವಾದ MDMA ಅನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತನನ್ನು ಮಹಮ್ಮದ್ ಆರೀಫ್ ಅಲಿಯಾಸ್ ಆರೀಫ್(28), ವಾಸ:, ನಲಿಕೆದ ಗುಡ್ಡೆ ಮನೆ, ಬೋಳಿಯಾರ್, ಉಳ್ಳಾಲ ತಾಲೂಕು ಎಂದು ‌ಗುರುತಿಸಲಾಗಿದೆ‌.

ಘಟನೆಯ ವಿವರ :
ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಎಂಡಿಎಂಎ (Methylene dioxy methamphetamine) ಅನ್ನು ಕಾರಿನಲ್ಲಿಟ್ಟುಕೊಂಡು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, KA-19-MH-3023 ಮಾರುತಿ ಅಲ್ಟೋ800 ಕಾರು, ಮೊಬೈಲ್ ಫೋನ್-1, ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆಯಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,35,500/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *