ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ಹೇಳಿದ್ದೇನು?

ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ಹೇಳಿದ್ದೇನು?

ನ್ಯೂಸ್ ಆ್ಯರೋ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.

ಪ್ರಕರಣದ 9ನೇ ಆರೋಪಿ ಕೆ. ಇಸ್ಮಾಯಿಲ್ ಶಫಿ, 10ನೇ ಆರೋಪಿ ಮೊಹಮ್ಮದ್ ಇಕ್ಬಾಲ್ ಹಾಗೂ 11ನೇ ಆರೋಪಿ ಮೊಹಮ್ಮದ್ ಶಾಹಿದ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಪ್ರಭಾಕರ ಶಾಸ್ತ್ರಿ, ನ್ಯಾಯಮೂರ್ತಿ ಅನಿಲ್ ಕೆ. ಕಟ್ಟಿ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ. ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಭೌತಿಕವಾಗಿ ಹಾಜರಿರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಪಿತೂರಿ ಸಭೆಯಲ್ಲಿ ಭಾಗವಹಿಸಿದ್ದರು. ಇವರು ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು ಎಂಬ ಅಂಶ ತನಿಖೆಯಲ್ಲಿ ತಿಳಿದು ಬಂದಿದೆ. ಅಪರಾಧ ಕೃತ್ಯಕ್ಕೆ ಪಿತೂರಿ ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ನಾಲ್ವರು ಸಾಕ್ಷಿಗಳ ಹೇಳಿಕೆಯ ಪ್ರಕಾರ, ಆರೋಪಿಗಳು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಫೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ, ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿತು.

ಅಲ್ಲದೆ, ಮೇಲ್ಮನವಿದಾರರು ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಮತ್ತು ಸುಗಮಗೊಳಿಸುವುದಾಗಿದೆ. ಕಾನೂನುಬಾಹಿರ ಚುಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿ) ಭಯೋತ್ಪಾದಕ ಕೃತ್ಯದ ಪೂರ್ವಸಿದ್ಧತೆ ಕ್ರಿಯೆಯಾಗಿದ್ದು, ಶಿಕ್ಷಾರ್ಹ ಅಪರಾಧ ಎಂದು ತಿಳಿಸಿದ ನ್ಯಾಯಪೀಠ, ಮೇಲ್ಮನವಿಯನ್ನು ವಜಾಗೊಳಿಸಿ ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ.

ಪ್ರಕರಣದ ಹಿನ್ನೆಲೆ :

ಕಳೆದ 2022 ಜು.26ರಂದು ರಾತ್ರಿ 8 ಗಂಟೆಗೆ ಪ್ರವೀಣ್ ನೆಟ್ಟಾರ್ ಕೊಲೆಯಾಗಿತ್ತು. ನೆಟ್ಟಾರಿನ ಶೇಖರ ಪೂಜಾರಿ-ರತ್ನಾವತಿ ದಂಪತಿಯ ಏಕ ಮಾತ್ರ ಪುತ್ರನಾಗಿದ್ದ ಪ್ರವೀಣ್‌ ಕಾಲೇಜು ಜೀವನದ ನಂತರ ಅಲ್ಲಿ ಇಲ್ಲಿ ಕೆಲವು ವೃತ್ತಿ ಮಾಡಿ ಕೊನೆಗೆ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಚಿಕನ್‌ ಸೆಂಟರ್‌ನ ಔಟ್ಲೆಟ್‌ ಹೊಂದಿದ್ದರು. ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದ ಪ್ರವೀಣ್‌ ಪರೋಪಕಾರಿ ವ್ಯಕ್ತಿ. ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ. ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದರು.

ಅಂದು ರಾತ್ರಿ ತನ್ನ ಚಿಕನ್‌ ಸೆಂಟರ್‌ ಮುಚ್ಚಿ ಮನೆಯತ್ತ ಹೆಜ್ಜೆ ಹಾಕಲು ಸಿದ್ದವಾಗುತ್ತಿದ್ದಂತೆ ತಂಡವೊಂದು ಬಂದು ಅವರನ್ನು ತಲವಾರುಗಳಿಂದ ಕೊಚ್ಚಿ ಹಾಕಿತ್ತು. ಗಂಭೀರ ಗಾಯಗೊಂಡ ಪ್ರವೀಣ್‌ ಪುತ್ತೂರು ಆಸ್ಪತ್ರೆಗೆ ಸಾಗಿಸುವ ಮಧ್ಯೆಯೇ ಕೊನೆಯುಸಿರೆಳೆದಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *