Mangalore : ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ ಹಚ್ಚಿದ ಸಿಸಿಬಿ‌ – ಇಬ್ಬರ ಬಂಧನ, ಲಕ್ಷಕ್ಕೂ ಅಧಿಕ ಮೌಲ್ಯದ ನಗದು, ಸೊತ್ತು ವಶಕ್ಕೆ..!

Mangalore : ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ ಹಚ್ಚಿದ ಸಿಸಿಬಿ‌ – ಇಬ್ಬರ ಬಂಧನ, ಲಕ್ಷಕ್ಕೂ ಅಧಿಕ ಮೌಲ್ಯದ ನಗದು, ಸೊತ್ತು ವಶಕ್ಕೆ..!

ನ್ಯೂಸ್ ಆ್ಯರೋ‌ : ಮಂಗಳೂರು ನಗರ ಕಮೀಷನರೇಟ್ ನ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ದೀಪಕ್(33), ವಾಸ: ಸರಕಾರಿ ಶಾಲೆ ಹತ್ತಿರ, ವಯಾ ಹಳೆಯಂಗಡಿ ಚೇಳ್ಯಾರು ಪೋಸ್ಟ್ ಮತ್ತು ಗ್ರಾಮ ಮಂಗಳೂರು ತಾಲೂಕು ಮತ್ತು ಸಂದೀಪ್ ಶೆಟ್ಟಿ(38), ವಾಸ: ಪಂಜಗುತ್ತು ಮನೆ, ಮರಕಡ, ಕಾವೂರು, ಮಂಗಳೂರು ಎಂದು ‌ಗುರುತಿಸಲಾಗಿದೆ.

ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಆ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಅದೃಷ್ಟದ ಆಟವಾದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಎಂದು ಅಂದಾಜಿಸಲಾಗಿದೆ.

ಆರೋಪಿಗಳ ವಿರುದ್ಧ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *