ಬೆಳ್ತಂಗಡಿ : ಭಾಸ್ಕರ್ ನಾಯ್ಕ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಯಾಕಿಲ್ಲ? : ಹೈಕೋರ್ಟ್ ಪ್ರಶ್ನೆ..!

ಬೆಳ್ತಂಗಡಿ : ಭಾಸ್ಕರ್ ನಾಯ್ಕ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಯಾಕಿಲ್ಲ? : ಹೈಕೋರ್ಟ್ ಪ್ರಶ್ನೆ..!

ನ್ಯೂಸ್ ಆ್ಯರೋ : ಉಜಿರೆ ಗ್ರಾಮದ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ, ಸೌಜನ್ಯಾ ಪ್ರಕರಣದ ಹೋರಾಟದ ಮುಂದಾಳು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಜೊತೆಗಾರರ ವಿರುದ್ಧ ಜಾಮೀನು ರಹಿತ ಅಟ್ರಾಸಿಟಿ ಕೇಸು ದಾಖಲಾಗಿದ್ದರೂ ಪೊಲೀಸರು ಇನ್ನೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಭಾಸ್ಕರ ನಾಯ್ಕರವರು ವಕೀಲ ಚಂದ್ರನಾಥ ಆರಿಗ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣದ ವರದಿ ನೀಡುವಂತೆ ತನಿಖಾಧಿಕಾರಿಗೆ ಆದೇಶಿಸಿದೆ ಎನ್ನಲಾದ ಮಾಹಿತಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ವೇಳೆ ಸದ್ಯ ಆರೋಪ ಎದುರಿಸುತ್ತಿರುವ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥರಾದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ಪೊಲೀಸ್ ಇಲಾಖೆಯನ್ನು ಪ್ರಶ್ನಿಸಿದೆ. ಮಹೇಶ್ ಶೆಟ್ಟಿ ವಿರುದ್ಧ ಜಾಮೀನು ರಹಿತ ಕೇಸು ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಮಹೇಶ್ ಶೆಟ್ಟಿ ಅಲ್ಲಲ್ಲಿ ಬಹಿರಂಗ ವೇದಿಕೆ ಮೂಲಕ ಭಾಷಣ ಮಾಡುತ್ತಿದ್ದಾರೆ. ಆದರೂ ಕ್ರಮ ಕೈಗೊಂಡಿಲ್ಲ. ಪೊಲೀಸ್ ಇಲಾಖೆ ಮಹೇಶ್ ಶೆಟ್ಟಿ ಜತೆ ಸೇರಿಕೊಂಡಿದೆಯೇ ಎಂದು ತನಿಖಾಧಿಕಾರಿಯವರನ್ನು ಪ್ರಶ್ನೆ ಮಾಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳು ಪ್ರಕರಣದ ಕುರಿತು 15 ದಿನಗಳೊಳಗೆ ವರದಿ ನೀಡುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.

ಪ್ರಕರಣದ ವಿವರ :

ಕಳೆದ ಸೆಪ್ಟೆಂಬರ್ 2ರಂದು ಮಂಗಳೂರಿನಲ್ಲಿ ಹಿರಿಯ ಕ್ರೈಂ ಪತ್ರಕರ್ತ ಮೋಹನ್ ಬೋಳಂಗಡಿಯವರ ಯೂಟ್ಯೂಬ್ ಚಾನೆಲ್‌ನ ನೇರಮಾತು ಕಾರ್ಯಕ್ರಮದಲ್ಲಿ ಭಾಸ್ಕರ ನಾಯ್ಕರವರು ಸಂದರ್ಶನ ನೀಡಿದ್ದರು. ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿರುವ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರಿಗೆ ನ್ಯಾಯ ಸಿಗಬೇಕು ಎಂದು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಈ ಸಂದರ್ಶನ ನಡೆಸಲಾಗಿತ್ತು.

ಸಂದರ್ಶನ ಮುಗಿಸಿ ಭಾಸ್ಕರ ನಾಯ್ಕರವರು ವಾಪಸು ತನ್ನ ಮನೆಗೆ ಬರುತ್ತಿರುವಾಗ ಸಂಜೆ 5 ಗಂಟೆ ಸುಮಾರಿಗೆ ಉಜಿರೆ ಗ್ರಾಮದ ಪಾಣೆಯಾಲು ಎಂಬಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿ ಕಾರಿನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಕಲ್ಲಿನಿಂದ ದೇಹದ ಭಾಗಗಳಿಗೆ ಹಲ್ಲೆ ನಡೆಸಿದ್ದಾರೆ‌ ಎನ್ನಲಾಗಿದೆ.

ಭಾಸ್ಕರ ನಾಯ್ಕ್ ಜೋರಾಗಿ ಬೊಬ್ಬೆ ಹೊಡೆದಾಗ ಹತ್ತಿರದ ಮನೆಯಲ್ಲಿದ್ದ ಅವರ ಪತ್ನಿ ಮಮತಾ ಬಿಡಿಸಲು ಪ್ರಯತ್ನಿಸಿದಾಗ ಪ್ರಮೋದ್ ಶೆಟ್ಟಿ ಎಂಬಾತ ಪತ್ನಿಗೂ ಕಲ್ಲಿನಿಂದ ಹೊಡೆದಿದ್ದಾರೆ. ಇಬ್ಬರ ಬೊಬ್ಬೆ ಕೇಳಿ ಅದೇ ಮಾರ್ಗವಾಗಿ ಹೋಗುತ್ತಿದ್ದ ಪರಿಚಯದವರಾದ ಜಯಪ್ರಕಾಶ್ ಶೆಟ್ಟಿ, ಶಂಕರ ಶೆಟ್ಟಿ ತಿಮರೋಡಿ, ಸುರೇಶ್ ನಾಯ್ಕ ಮತ್ತು ಇತರರನ್ನು ನೋಡಿ ಆರೋಪಿಗಳು ಹಲ್ಲೆಗೆ ಬಳಸಿದ ಕಲ್ಲನ್ನು ಸ್ಥಳದಲ್ಲಿ ಬಿಸಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಸೆಪ್ಟೆಂಬರ್ 3ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾಸ್ಕರ ನಾಯ್ಕ ಪ್ರಕರಣ ದಾಖಲಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿಯವರೊಂದಿಗೆ ಮೋಹನ್ ಶೆಟ್ಟಿ, ಮುಕೇಶ್ ಶೆಟ್ಟಿ, ಪ್ರಜ್ವಲ್ ಕೆ.ವಿ.ಗೌಡ, ನೀತು ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿಯವರನ್ನು ಆರೋಪಿಗಳು ಎಂದು ಹೆಸರಿಸಲಾಗಿದ್ದು ಇವರ ವಿರುದ್ಧ ಐಪಿಸಿ 143, 147, 148, 341, 342, 354, 324, 504, 506 ಮತ್ತು 149ರಡಿ ಕೇಸ್ ದಾಖಲಿಸಲಾಗಿತ್ತು.

ಇದಾದ ಬಳಿಕ ಬೆಳ್ತಂಗಡಿ ಠಾಣಾ ಪೊಲೀಸರು ಮಂಗಳೂರು ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಿದ್ದರು. ಆದರೆ ಇದುವರೆಗೂ ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದು ಭಾಸ್ಕರ ನಾಯ್ಕ ದೂರಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಶೀಘ್ರವಾಗಿ ವರದಿ ನೀಡುವಂತೆ ಪ್ರಕರಣದ ತನಿಖಾಧಿಕಾರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.

ದೂರಿನಲ್ಲಿರುವ ಲೋಪ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯವೇ?

ದೂರುದಾರ ಭಾಸ್ಕರ ನಾಯ್ಕ ನೀಡಿರುವ ದೂರಿನಲ್ಲಿ ಘಟನೆ ನಡೆದ ವೇಳೆ ನೀಡಿರುವ ಸಮಯ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲೇ ಇದ್ದರು‌ ಎಂಬ ಬಗ್ಗೆ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸದ್ಯ ಪ್ರಕರಣದ ವಿಚಾರಣೆ ನಡೆಸಲಿರುವ ತನಿಖಾಧಿಕಾರಿಗೆ ಇದೇ ಒಂದು ಮೂಲ ಸಾಕ್ಷಿಯಾಗಲಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಕಷ್ಟ ಸಾಧ್ಯ ಎಂದು ವ್ಯಾಖ್ಯಾನಿಸಲಾಗುತ್ತಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *