ಚೈತ್ರಾ ಕುಂದಾಪುರ ಕೋಟ್ಯಾಂತರ ರೂಪಾಯಿ ಆಸ್ತಿ ಪಾಸ್ತಿ ಮುಟ್ಟುಗೋಲು – ಯಾರದ್ದೋ ದುಡ್ಡಲ್ಲಿ ಎಲ್ಲಮ್ಮನ ಜಾತ್ರೆ ಮಾಡ್ತಿದ್ಲು ವಂಚಕಿ…!!

ಚೈತ್ರಾ ಕುಂದಾಪುರ ಕೋಟ್ಯಾಂತರ ರೂಪಾಯಿ ಆಸ್ತಿ ಪಾಸ್ತಿ ಮುಟ್ಟುಗೋಲು – ಯಾರದ್ದೋ ದುಡ್ಡಲ್ಲಿ ಎಲ್ಲಮ್ಮನ ಜಾತ್ರೆ ಮಾಡ್ತಿದ್ಲು ವಂಚಕಿ…!!

ನ್ಯೂಸ್ ಆ್ಯರೋ : ಬೈಂದೂರು ವಿಧಾನಸಭಾ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಬರ್ ಒನ್ ಆರೋಪಿ ಚೈತ್ರಾ ಕುಂದಾಪುರಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಸರ್ಚ್ ವಾರೆಂಟ್ ಪಡೆದು ಶೋಧನೆ ನಡೆಸಿದ ಸಿಸಿಬಿ ಪೊಲೀಸರು ಉಡುಪಿಯ ಉಪ್ಪೂರು ಶ್ರೀರಾಮ ಸೊಸೈಟಿಯ ಬ್ಯಾಂಕ್ ಲಾಕರ್​ನಲ್ಲಿ ಇಟ್ಟಿದ್ದ ಆಸ್ತಿ ಪತ್ರ, ಬಂಗಾರವನ್ನು ಪತ್ತೆ ಮಾಡಿದ್ದಾರೆ. 1.8 ಕೋಟಿ ರೂ. ಮೌಲ್ಯದ ಆಸ್ತಿ ಪತ್ರ, 40 ಲಕ್ಷ ನಗದು, 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಚೈತ್ರಾ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಳು. ಅಲ್ಲದೆ ಶ್ರೀಕಾಂತ್ ಹೆಸರಲ್ಲಿ ಉಡುಪಿಯ ಹಿರಿಯಡ್ಕದಲ್ಲಿ ಎರಡು ಹಂತಸ್ತಿನ ಮನೆ ಕಟ್ಟಿಸುತ್ತಿದ್ದಳು.

ಚೈತ್ರಾ ಕುಂದಾಪುರ ಹಿರಿಯಡ್ಕದಲ್ಲಿ 20 ಸೆಂಟ್ಸ್ ಜಾಗ ಖರೀದಿಸಿ ಮನೆ ಕಟ್ಟಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಗೆಳೆಯ ಶ್ರೀಕಾಂತ್ ನಾಯಕ್ ಹೆಸರಿನಲ್ಲಿ ಸೆಂಟ್ಸ್​ಗೆ 50 ಸಾವಿರ ರೂ. ನೀಡಿ ಜಾಗ ಖರೀದಿಸಲಾಗಿದ್ದು, ಎರಡು ಅಂತಸ್ತಿನ ಮನೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದನೇ ಅಂತಸ್ತಿನ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಬೆಂಗಳೂರಿನ ಮಂಗಮ್ಮನ ಪಾಳ್ಯದಲ್ಲಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಕಚೇರಿ, ಗೋವಿಂದ ರಾಜನಗರದಲ್ಲಿರುವ ಸ್ವಾಮೀಜಿ ನಿವಾಸ, ಕೆ.ಕೆ.ಗೆಸ್ಟ್ ಹೌಸ್​ನ ಎರಡನೇ ಮಹಡಿಯಲ್ಲಿರುವ 207 ಸಂಖ್ಯೆ ರೂಮ್ ಅನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಗೋವಿಂದ ಬಾಬು ಪೂಜಾರಿ ಕಚೇರಿಯಲ್ಲಿ ಟಿಕೆಟ್ ಕೊಡಿಸುವ ಸಂಬಂಧ ಮೀಟಿಂಗ್ ನಡೆದಿದ್ದು, ಅಲ್ಲದೇ ಆರೋಪಿ ಗಗನ್ ಅಲ್ಲಿಂದಲೇ ಹಣ ತೆಗೆದುಕೊಂಡು ಹೋಗಿದ್ದ. ಹೀಗಾಗಿ ಅಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಗೋವಿಂದರಾಜನಗರ ನಿವಾಸದಲ್ಲಿ ಸ್ವಾಮೀಜಿ ಒಂದೂವರೆ ಕೋಟಿ ರೂ. ಪಡೆದಿದ್ದರು ಎನ್ನಲಾಗಿದೆ. ಜತೆಗೆ ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಹಲವು ಬಾರಿ ಮೀಟಿಂಗ್ ನಡೆದಿತ್ತು. ಇನ್ನು ಮತ್ತೊಬ್ಬ ಆರೋಪಿ ಚೆನ್ನಾನಾಯ್ಕ್ ಚುನಾವಣಾ ಸಮಿತಿ ಸದಸ್ಯ ಎಂದು ಭೇಟಿಯಾಗಿದ್ದು, ಇಲ್ಲಿಯೇ. ಹೀಗಾಗಿ ಮೂರು ಕಡೆಗಳಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸ್ವಾಮೀಜಿ ನಿವಾಸ ಮತ್ತು ಮಠ ಸೇರಿ ಹಲವು ಕಡೆ ಮಹಜರು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚೈತ್ರಾ ಚೇತರಿಕೆ

ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆರೋಗ್ಯ ಸುಸ್ಥಿತಿಯಲ್ಲಿದೆ. ಎಂಆರ್​ಐ ಮತ್ತು ಇಸಿಜಿ ವರದಿ ನಾರ್ಮಲ್ ಆಗಿದ್ದು, ಆಸ್ಪತ್ರೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ಬಿಎಂಆರ್​ಸಿಎಲ್​ನ ಡೀನ್ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ. ಸಿಸಿಬಿ ಪೊಲಿಸರ ವಶದಲ್ಲಿದ್ದ ಚೈತ್ರಾ ಕುಂದಾಪುರ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಸ್ವಾಮೀಜಿ ದೂರು ನೀಡಿದ್ದಾರೆ. ಗೋವಿಂದಬಾಬು, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್, ಉಡುಪಿ ಜಿಲ್ಲೆ ಬೈಂದೂರಿನ ದಿನೇಶ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ.11ರಂದು ದೂರು ನೀಡಿದ್ದರು. ಸ್ವಾಮೀಜಿ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದಾರೆ.

ಈ ಮಧ್ಯೆ ಸ್ವಾಮೀಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಎ3 ಆರೋಪಿ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಲಾಗಿದೆ. ಸ್ವಾಮೀಜಿ ಪರ ವಕೀಲ ಅರುಣ್ ಶ್ಯಾಮ್ ವಂಚನೆ ಪ್ರಕರಣದಲ್ಲಿ ಸ್ವಾಮೀಜಿ ವಿರುದ್ಧ ಯಾವುದೇ ಆರೋಪವಿಲ್ಲ. ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಸ್ವಾಮೀಜಿಗೆ ಜಾಮೀನು ನೀಡದಂತೆ ಗೋವಿಂದಬಾಬು ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಬಿಲ್ ಮೇಲೂ ಅನುಮಾನ..!

ಚೈತ್ರಾ ಕುಂದಾಪುರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಸಿಸಿಬಿ ವಿಶೇಷ ತಂಡ ತನಿಖೆ ಕೈಗೊಂಡಿದೆ. ಸಿಸಿಬಿ ಕಚೇರಿಗೆ ವಿಚಾರಣೆಗೆ ಆಗಮಿಸಿದ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಚೈತ್ರಾ ಆರೋಪ ಮಾಡಿದ್ದರು. ಬಾಕಿ ಬಿಲ್ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಶೇಷ ತಂಡ ರಚಿಸಿದ್ದು, ಮಾಹಿತಿ ಕಲೆ ಹಾಕಲು ಮುಂದಾದ ತಂಡ ಪಾಲಿಕೆಯ ಹಿರಿಯ ಅಧಿಕಾರಿಗಳ ಬಳಿ ಮಾಹಿತಿ ಸಂಗ್ರಹಿಸಿದೆ. ಜತೆಗೆ ಇಂದಿರಾ ಕ್ಯಾಂಟಿನ್ ಬಿಲ್ ಬಿಡುಗಡೆ ಮಾಡುವ ಅಧಿಕಾರಿಗಳ ಕಾಲ್ ಡೀಟೈಲ್ಸ್ ಕೂಡ ಕಲೆ ಹಾಕಿದ್ದಾರೆ.

ಗೋವಿಂದಬಾಬು ಪೂಜಾರಿಗೆ ಸೇರಿದ ಕ್ಯಾಂಟಿನ್ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗೋವಿಂದಬಾಬು ಎಷ್ಟು ವರ್ಷಗಳಿಂದ ಕ್ಯಾಂಟಿನ್​ಗಳಿಗೆ ಊಟ ಸರಬರಾಜು ಮಾಡುತ್ತಿದ್ದಾರೆ. ಇದುವರೆಗೂ ಇವರಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? ಕಳೆದ ಎರಡು ವರ್ಷಗಳಿಂದ ಎಷ್ಟು ಹಣ ಬಾಕಿ ನೀಡಬೇಕಿತ್ತು. ಮೂರು ತಿಂಗಳಲ್ಲಿ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? ಎಂಬುದು ಸೇರಿ ಕ್ಯಾಂಟಿನ್​ಗೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಬಗ್ಗೆ ಸಿಸಿಬಿ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದು, ತನಿಖೆ ಮುಂದುವರೆದಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *