
ಚೈತ್ರಾ ವಂಚನೆ ಪ್ರಕರಣದ ಸಿಸಿಬಿ ತನಿಖೆ ಮುಕ್ತಾಯ – 68 ಸಾಕ್ಷಿಗಳ ಹೇಳಿಕೆ ದಾಖಲು, ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
- ಕರಾವಳಿ
- November 2, 2023
- No Comment
- 46
ನ್ಯೂಸ್ ಆ್ಯರೋ : ಬಿಜೆಪಿ ಪಕ್ಷದ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೂರ್ಣಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶೀಘ್ರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ.
ಉದ್ಯಮಿ ಗೋವಿಂದ್ ಬಾಬು ಪೂಜಾರಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಯನ್ನು ಬಂಧನಕ್ಕೊಳಪಡಿಸಿದ 50 ದಿನಗಳ ಬಳಿಕ ತನಿಖೆಯನ್ನು ಸಿಸಿಬಿ ಪೂರ್ಣಗೊಳಿಸಿದೆ.
ಆರೋಪಿಗಳಿಂದ 4.11 ಕೋಟಿ ರೂ. ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ 68 ಸಾಕ್ಷಿಗಳಿಂದ ಹೇಳಿಕೆ ಪಡೆದು ಆಡಿಯೋ, ವಿಡಿಯೋಗಳನ್ನು ಸಂಗ್ರಹಿಸಿದ್ದಾರೆ.
ಆರೋಪಿಗಳಾದ ಚೈತ್ರಾ ಕುಂದಾಪುರ, ಶ್ರೀಕಾಂತ್, ಗಗನ್ ಕಡೂರ್, ವಿಜಯನಗರ ಮಠದ ಹಾಲಶ್ರೀ, ಧನರಾಜ್ ಮತ್ತು ಚನ್ನನಾಯಕ್ ವಿರುದ್ಧ ಪೊಲೀಸರು ಮುಂದಿನ ವಾರ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ.