ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ ಪ್ರಯತ್ನ ತೆರೆಮರೆಯಲ್ಲಿ ಸಾಗಿದೆ. ಬಿಜೆಪಿ ಪಕ್ಷದಿಂದ ಬಿಲ್ಲವರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉನ್ನತ ಸ್ಥಾನಮಾನ ಲಭಿಸದ ಹಿನ್ನೆಲೆಯಲ್ಲಿ ಅತೃಪ್ತಗೊಂಡಿರುವ ಬಿಲ್ಲವ ನಾಯಕರು ಜಿಲ್ಲಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಆರಂಭಿಸಿದ್ದಾರೆ.

ಕಾಂಗ್ರೆಸ್ ಟಿಕೆಟ್ ಲಭಿಸುತ್ತಲೇ ಕುದ್ರೋಳಿ ಗೋಕರ್ಣನಾಥೇಶ್ವರನ ಅನುಗ್ರಹ ಪಡೆದಿರುವ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ತಮ್ಮ ಆಪ್ತಬಳಗದ ಜೊತೆ ಪ್ರಚಾರ ಸಂಬಂಧ ಚರ್ಚಿಸಿದ್ದು, ಕಾಂಗ್ರೆಸ್ ನ ಪರ ಇರುವ ಮತದಾರರನ್ನೂ ಸೇರಿದಂತೆ ಬಿಲ್ಲವ ಸಮುದಾಯದ ಮನವೊಲಿಸಲು ಪ್ರಯತ್ನಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಸದ್ಯ ಚುನಾವಣಾ ಕಾವು ಏರಿರುವಂತೆ ನಿನ್ನೆ ಪದ್ಮರಾಜ್ ಅವರ ಅಧಿಕೃತ ಚುನಾವಣಾ ಕಾರ್ಯಾಲಯವು ಮಾಜಿ ಸಚಿವ, ಪದ್ಮರಾಜ್ ಅವರ ರಾಜಕೀಯ ಗುರುಗಳದ ಸನ್ಮಾನ್ಯ ಬಿ. ಜನಾರ್ಧನ ಪೂಜಾರಿಯವರ ದಿವ್ಯ ಹಸ್ತದಿಂದ ಉದ್ಘಾಟನೆಗೊಂಡಿದ್ದು, ಬಳಿಕ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ‌.

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರೆ ಪ್ರತಿಭಾ ಕುಳಾಯಿ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಮಂಗಳೂರು ನಗರದ ಮಲ್ಲಿಕಟ್ಟೆಯ ಇಂದಿರಾ ಗಾಂಧಿ ಜನ್ಮ ಶತಾಬ್ದಿ ಭವನದಲ್ಲಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಪದ್ಮರಾಜ್ ಮಾತನಾಡಿದ್ದು, ಗೆಲುವಿಗಾಗಿ ಎಲ್ಲಾ ಕಾರ್ಯಕರ್ತರು ಯುದ್ದೋಪಾದಿಯಲ್ಲಿ ದುಡಿಯುವಂತೆ ಕರೆ ನೀಡಿದರು.

ಇಂದೂ ಕೂಡ ಬೆಳ್ತಂಗಡಿ ತಾಲೂಕಿನ ಹಲವೆಡೆ ಪದ್ಮರಾಜ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುತ್ತಿದ್ದು, ಪಕ್ಷ ಹಾಗೂ ತನ್ನ ಗೆಲುವಿಗೆ ಸಹಕರಿಸುವಂತೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *