ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ‌ನಾಳೆಯೂ (ಜುಲೈ 6) ರಜೆ – ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ‌ನಾಳೆಯೂ (ಜುಲೈ 6) ರಜೆ – ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ( Dakshina Kannada) ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,(Heavy Rain) ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು (July 06) ಆರೆಂಜ್ ಅಲರ್ಟ್ (Orange Alert) ಘೋಷಣೆಯಾಗಿದ್ದು, ನಾಳೆಯೂ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ಅಂದರೆ ದಿನಾಂಕ: 06.07.2023 ಗುರುವಾರದಂದು ರಜೆಯನ್ನು (Holiday) ಘೋಷಿಸಿದೆ‌.

ಸೂಚನೆಗಳು

  1. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು
  2. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  3. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
  4. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
  5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
  6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು, ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24×7
ಕಂಟ್ರೋಲ್ ರೂಂ 1077/ 0824 2442590

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *