Disappointment of getting a medal in the national level sports event - student commits suicide by consuming pesticides

ಪುತ್ತೂರು : ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪದಕ ದಕ್ಕದ ನಿರಾಸೆ‌ – ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ನ್ಯೂಸ್ ಆ್ಯರೋ : ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್‌ನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ, ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಕ್ಕಿರಲಿಲ್ಲ. ಇದರಿಂದ ನಿಶಾ ತೀವ್ರ ಬೇಸರಗೊಂಡಿದ್ದಳು.

ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನು ಸೇವಿಸಿದ್ದಳು. ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ದಿದ್ದು, ಕಳೆದ ಒಂದು ವಾರದಿಂದ ಸಾವು ಬದುಕಿನ ಮಧ್ಯೆ ನಿಶಾ ಹೋರಾಡುತ್ತಿದ್ದಳು.

ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.