ಬ್ರಹ್ಮಾವರದ ಅಂಬೇಡ್ಕರ್ ಭವನದಲ್ಲಿ ಡಿಎಸ್​ಎಸ್ ಮುಖಂಡರ ಎಣ್ಣೆ ಪಾರ್ಟಿ – ವಿಡಿಯೋ ವೈರಲ್, ಪ್ರಕರಣ ದಾಖಲು

ಬ್ರಹ್ಮಾವರದ ಅಂಬೇಡ್ಕರ್ ಭವನದಲ್ಲಿ ಡಿಎಸ್​ಎಸ್ ಮುಖಂಡರ ಎಣ್ಣೆ ಪಾರ್ಟಿ – ವಿಡಿಯೋ ವೈರಲ್, ಪ್ರಕರಣ ದಾಖಲು

ನ್ಯೂಸ್ ಆ್ಯರೋ : ಬೇಲಿಯೇ ಎದ್ದು ಹೊಲ ಮೇಯೋದು‌ ಅಂದ್ರೆ ಇದೇ..! ಡಿಎಸ್​ಎಸ್ ಮುಖಂಡ ಶ್ಯಾಮರಾಜ್ ಭಿರ್ತಿ ಮತ್ತವರ ಸಂಗಡಿಗರು ಯಾವುದೇ ಅನುಮತಿ ಪಡೆಯದೆ ಅಂಬೇಡ್ಕರ್ ಭವನದಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿ ನಡೆದಿದೆ.

ಡಿಎಸ್ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಸಂಭ್ರಮಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಗ್ರಂಥಾಲಯವನ್ನು ಒಳಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದ ಬಳಿಕ ಯಾವುದೇ ಪೂರ್ವಾನುಮತಿ ಇಲ್ಲದೆ ಜಿಲ್ಲಾ ಸಂಚಾಲಕ, ಡಿಎಸ್ಎಸ್ ಮುಖಂಡರು ಮತ್ತು ಸ್ಥಳೀಯರು ಎಣ್ಣೆ ಪಾರ್ಟಿ ಮಾಡಿದ್ದಾರೆ.

ವೀಡಿಯೋ ವೀಕ್ಷಿಸಿ..

ಅಂಬೇಡ್ಕರ್ ಭವನದಲ್ಲಿ ಮದ್ಯ ಸೇವನೆ ಮಾಡುತ್ತಿರುವ ವಿಚಾರ ತಿಳಿದ ಸವಿತಾ ಎಂಬವರು ಭವನಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *