Mangalore : ಬೆಂಗಳೂರಿನಲ್ಲಿ ಇದ್ದುಕೊಂಡೇ ಮಂಗಳೂರಿನಲ್ಲಿ ಡ್ರಗ್ಸ್ ಸೇಲ್ – ಕೊನೆಗೂ ಸಿಸಿಬಿ ಪೋಲಿಸರ ಬಲೆಗೆ ಬಿದ್ದ ನೈಜೀರಿಯಾ ಮೂಲದ ಮಹಿಳಾ ಡ್ರಗ್ ಪೆಡ್ಲರ್

Mangalore : ಬೆಂಗಳೂರಿನಲ್ಲಿ ಇದ್ದುಕೊಂಡೇ ಮಂಗಳೂರಿನಲ್ಲಿ ಡ್ರಗ್ಸ್ ಸೇಲ್ – ಕೊನೆಗೂ ಸಿಸಿಬಿ ಪೋಲಿಸರ ಬಲೆಗೆ ಬಿದ್ದ ನೈಜೀರಿಯಾ ಮೂಲದ ಮಹಿಳಾ ಡ್ರಗ್ ಪೆಡ್ಲರ್

ನ್ಯೂಸ್ ಆ್ಯರೋ‌ ‌: ಡ್ರಗ್ಸ್ ಫ್ರಿ ಮಂಗಳೂರು ಮಾಡಲು ಪಣ ತೊಟ್ಟಿರುವ ಮಂಗಳೂರು ಪೋಲಿಸರು ಡ್ರಗ್ಸ್ ಮಾರಾಟ/ಸಾಗಾಟ ಜಾಲದ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯೊಬ್ಬಳನ್ನು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರು ಇತ್ತೀಚಿನ ದಿನಗಳಲ್ಲಿ ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಪ್ರಮುಖ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಎಂಡಿಎಂಎ ನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಡ್ರಗ್ ದಂಧೆಯ ಕಿಂಗ್ ಪಿನ್ ಅನ್ನು ಪತ್ತೆ ಹಚ್ಚುವ ಸಲುವಾಗಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿದಾಗ ಈ ಮಾದಕ ವಸ್ತುಗಳನ್ನು ಆರೋಪಿಗಳಿಗೆ ನೈಜೀರಿಯಾ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ವಿದೇಶಿ ಮಹಿಳೆಯೊಬ್ಬಳು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿತ್ತು.

ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಅಡೆವೊಲೆ ಅಡೆಟುಟು ಆನು @ ರೆಜಿನಾ ಜರಾ @ ಆಯಿಶಾ(33), ತಂದೆ: ಅಡೆವೊಲೆ ಮೊಗಾಜಿ, ವಾಸ: ನಂ.8, ಓಲ್ಡ್ ಸಿಜುವಾಡ್ ರಸ್ತೆ, ಅಕುರೆ, ಒಂಡೋ ರಾಜ್ಯ, ನೈಜೀರಿಯಾ.( ADEWOLE ADETUTU AANU @ REGINA ZARA @ AYISHA, Age: 33 Years, D/o: Adewole Mogaji, R/o: No.8, Old Sijuade Road, Akure, Ondo State, Nigeria. ) ಹಾಲಿ ವಾಸ: ರೂಮ್ ನಂಬ್ರ: 007, ನೆಲ ಮಹಡಿ, G.P. North Avenue ಅಪಾರ್ಟಮೆಂಟ್, ಚೊಕ್ಕನ ಹಳ್ಳಿ ಮೇನ್ ರೋಡ್, ಜಕ್ಕೂರು ಪೋಸ್ಟ್, ಯಲಹಂಕ ಹೋಬಳಿ, ಬೆಂಗಳೂರು ಎಂಬಾಕೆಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತಳ ವಶದಲ್ಲಿದ್ದ ಒಟ್ಟು 400 ಗ್ರಾಂ ತೂಕದ ರೂ. 20,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಐಫೋನ್-1, ನಗದು ರೂ. 2910/- ಅನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910/- ಎಂದು ಅಂದಾಜಿಸಲಾಗಿದೆ.

ಆರೋಪಿ ಮಹಿಳೆಯು ನೈಜೀರಿಯಾ ದೇಶದ ಪ್ರಜೆಯಾಗಿದ್ದು, ಈಕೆಯು ವ್ಯಾಸಂಗ ವೀಸಾದಡಿಯಲ್ಲಿ ಭಾರತಕ್ಕೆ ಬಂದು ವಿದ್ಯಾಭ್ಯಾಸ ಮಾಡಿಕೊಂಡು ನಂತರ ಇಲ್ಲಿ ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದಳು. ಈ ನರ್ಸಿಂಗ್ ಕೆಲಸವನ್ನು ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದು‌ ತನಿಖೆಯಲ್ಲಿ ಬಯಲಾಗಿದೆ.

ಈಕೆಯ ವಿರುದ್ಧ ಪ್ರಸ್ತುತ ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಈ 7 ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತುವನ್ನು ಖರೀದಿಸಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *