ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ದ ಮತ್ತೆ ಗಡಿಪಾರು ಅಸ್ತ್ರ – ಲತೇಶ್ ಗುಂಡ್ಯ ಸೇರಿ ಐವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ದ ಮತ್ತೆ ಗಡಿಪಾರು ಅಸ್ತ್ರ – ಲತೇಶ್ ಗುಂಡ್ಯ ಸೇರಿ ಐವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ನ್ಯೂಸ್ ಆ್ಯರೋ : ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ.

ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಗೆ ಅವರಿಗೆ ಗಡಿಪಾರು ಮಾಡುವ ಕುರಿತಂತೆ ಕಾರಣ ಕೇಳಿ ಪೊಲೀಸ್ ಇಲಾಖೆ ನೋಟೀಸ್ ಜಾರಿ ಮಾಡಿದೆ.

ಭಜರಂಗದಳದಲ್ಲಿ ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿರೋ ದಿನೇಶ್, ಪ್ರಜ್ವಲ್, ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿರೋ ಲತೇಶ್ ಗುಂಡ್ಯ ಹಾಗೂ ಭಜರಂಗದಳ ಕಾರ್ಯಕರ್ತರಾದ ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಗೆ ನೋಟೀಸ್ ನೀಡಲಾಗಿದೆ. ಈ ಎಲ್ಲರಿಗೂ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.

ಈ ಐವರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ಮೇಲೆ ಒಂದೊಂದು ಪ್ರಕರಣಗಳಿದ್ದು, ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿ ಆರೋಪ ಇದೆ. ಈ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆ ಹಾಗೂ ಸುಳ್ಯ ಠಾಣೆಯಿಂದ ಐವರ ಗಡೀಪಾರಿಗೆ ಮನವಿ ಮಾಡಲಾಗಿದೆ.

ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರಡಿ ಎಲ್ಲರಿಗೂ ಗಡೀಪಾರು ನೋಟೀಸ್ ನೀಡಲಾಗಿದೆ. ಅದರಲ್ಲಿ ಲತೇಶ್ ಗೆ ಬಳ್ಳಾರಿ ಜಿಲ್ಲೆ, ಪ್ರಜ್ವಲ್ ಗೆ ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಮನವಿ ಮಾಡಲಾಗಿದೆ.

ನವೆಂಬರ್ 22 ರಂದು ಎಲ್ಲರಿಗೂ ವಿಚಾರಣೆಗೆ ಹಾಜರಾಗಲು ಮನವಿ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಳೆದ ಬಾರಿಯೂ ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರಿಗೆ ಆದೇಶ ನೀಡಲಾಗಿತ್ತು, ಆದರೆ ನ್ಯಾಯಾಲಯ ಮೆಟ್ಟಿಲೇರಿದ್ದ ಕಾರ್ಯಕರ್ತರು ಆದೇಶಕ್ಕೆ ತಡೆ ತಂದಿದ್ದರು.

ಇದೀಗ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡೀಪಾರಿಗೆ ವರದಿ ತರಿಸಿಕೊಂಡು ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಮಾಡಲು ಸರಕಾರ ಅಸ್ತ್ರ ಪ್ರಯೋಗ ಮಾಡಿದೆ.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *