Mangalore : ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ರಿಂಗ್ ಆಯ್ತು ಬಚ್ಚಿಟ್ಟ ಮೊಬೈಲ್..!! – 17ರ ಹರೆಯದ ಅಪ್ರಾಪ್ತ ಬಾಲಕ ಪೋಲಿಸರ ವಶಕ್ಕೆ..!!

Mangalore : ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ರಿಂಗ್ ಆಯ್ತು ಬಚ್ಚಿಟ್ಟ ಮೊಬೈಲ್..!! – 17ರ ಹರೆಯದ ಅಪ್ರಾಪ್ತ ಬಾಲಕ ಪೋಲಿಸರ ವಶಕ್ಕೆ..!!

ನ್ಯೂಸ್ ಆ್ಯರೋ : ಮಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಖಲಾಗಿರುವ ದೂರಿನ ಪ್ರಕಾರ ದಿನಾಂಕ 06.05.2024 ರಂದು ಸಂಜೆ 3.30 ಗಂಟೆಗೆ ಕಸ್ತೂರ್ಬಾ ಕಾಲೇಜಿನ 1 ನೇ ಮಹಡಿಯಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ರಿಂಗ್ ಆಗಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸಿದಾಗ ಟಾಯ್ಲೆಟ್ ನಲ್ಲಿ ಯಾರೂ ಇರಲ್ಲಿಲ್ಲ. ಅಲ್ಲದೆ ಮೊಬೈಲ್ ನ್ನು ಎಕ್ಸಾಸ್ಟ್ ಫ್ಯಾನ್ ಬಳಿ ಇಡಲಾಗಿದ್ದು ಕಂಡು ಬಂದಿದೆ.

ಟಾಯ್ಲೆಟ್ ಗೆ ಬರುವ ಮಹಿಳೆಯರ ದೃಶ್ಯ ಸೆರೆ ಮಾಡಲು ಇರಿಸಿದ ಸ್ಥಿತಿಯಲ್ಲಿ ಮೊಬೈಲ್ ಕಂಡು ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರಿನ ಬಂದರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ದಾಖಲಾದ ಬೆನ್ನಲ್ಲೇ 17ರ ಹರೆಯದ ಅಪ್ರಾಪ್ತ ಬಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *