ಸಿಎಂ ವಿರುದ್ಧ ಬೆಳ್ತಂಗಡಿ ಶಾಸಕರ ಅವಹೇಳನಕಾರಿ ಹೇಳಿಕೆ – ಸಿಡಿ ಒದಗಿಸಲು ಹೈಕೋರ್ಟ್ ನಿಂದ ಖಡಕ್ ಆರ್ಡರ್..!!

ಸಿಎಂ ವಿರುದ್ಧ ಬೆಳ್ತಂಗಡಿ ಶಾಸಕರ ಅವಹೇಳನಕಾರಿ ಹೇಳಿಕೆ – ಸಿಡಿ ಒದಗಿಸಲು ಹೈಕೋರ್ಟ್ ನಿಂದ ಖಡಕ್ ಆರ್ಡರ್..!!

ನ್ಯೂಸ್ ಆ್ಯರೋ ‌: ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹೇಳಿಕೆಯ ಸಿಡಿ ಒದಗಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಮೇ 22 ರಂದು ಅಭಿನಂದನಾ ಸಮಾರಂಭವೊಂದರಲ್ಲಿ ಸಿದ್ದರಾಮಯ್ಯ 24 ಹಿಂದು ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಪೂಂಜ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐ ಆರ್ ಹಾಗು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸಬೇಕು ಎಂದು ಶಾಸಕ ಹರೀಶ್ ಪೂಂಜ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಉಲ್ಲೇಖಿಸಿರುವ ಹೇಳಿಕೆಯ ಸಿಡಿ ಒದಗಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಏಕಸದಸ್ಯ ಪೀಠದಿಂದ ಕೋರ್ಟ್ ಆದೇಶ ನೀಡಿದೆ. ಆಕ್ಷೇಪಣೆ ಸಲ್ಲಿಸಲು ಫಿರ್ಯಾದುದಾರರ ಪರ ವಕೀಲ ಬಿ. ಲತೀಫ್ ಎರಡು ವಾರಗಳ ಸಮಯಾವಕಾಶ ಕೋರಿದ್ದಾರೆ. ಹೀಗಾಗಿ ಡಿಸೆಂಬರ್ 8ಕ್ಕೆ ವಿಚಾರಣೆಯನ್ನು ನ್ಯಾಯಪೀಠ ಮುಂದೂಡಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *