ಉಡುಪಿ : ಹಿಂದೂ ಸಮಾಜೋತ್ಸವ ಬ್ಯಾನರ್ ತೆರವು, ಶಾಸಕರಿಂದ ಎಸ್ಪಿ ಭೇಟಿ – ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಕ್ರಮ : ಎಸ್ಪಿ ಹೇಳಿಕೆ

ಉಡುಪಿ : ಹಿಂದೂ ಸಮಾಜೋತ್ಸವ ಬ್ಯಾನರ್ ತೆರವು, ಶಾಸಕರಿಂದ ಎಸ್ಪಿ ಭೇಟಿ – ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಕ್ರಮ : ಎಸ್ಪಿ ಹೇಳಿಕೆ

ನ್ಯೂಸ್ ಆ್ಯರೋ : ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಳೀಯಾಡಳಿತದ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಮಂಗಳವಾರ ನಡೆಸಿದರು.

ನಗರಸಭೆಯಿಂದ ಯಾವುದೇ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ಬ್ಯಾನರ್ ಹಾಗೂ ಕಟೌಟ್‌ಗಳನ್ನು ಉಡುಪಿ ನಗರಸಭೆ ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸಿದರು.

ಅದೇ ರೀತಿ ಅ.10ರಂದು ಉಡುಪಿ ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವಕ್ಕೆ ಸಂಬಂಧಿಸಿದ ಬ್ಯಾನರ್‌ಗಳನ್ನು ಅನುಮತಿ ಪಡೆಯದೆ ಅನಧಿಕೃತವಾಗಿ ಅಳವಡಿಸಲಾಗಿದ್ದು, ಇವುಗಳನ್ನು ಕೂಡ ನಗರಸಭೆ ಅಧಿಕಾರಿಗಳು ತೆರವುಗೊಳಿಸಿದರು ಎಂದು ತಿಳಿದುಬಂದಿದೆ. ಸಂಬಂಧಪಟ್ಟವರು ಸಂಜೆ ವೇಳೆ ಕಟೌಟ್‌ಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿರುವುದಾಗಿ ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದು ಸಮಾಜೋತ್ಸವದ ಬ್ಯಾನರ್‌ಗಳನ್ನು ತೆರವು ಗೊಳಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಳವಡಿಸಲಾದ ಅನಧಿಕೃತ ಬ್ಯಾನರ್‌ಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡಿದೆ. ಈ ಹಿಂದಿನಂತೆ ಸಮಾಜೋತ್ಸವ ನಡೆಯುವ ಸಂದರ್ಭದಲ್ಲಿ ನಗರದಲ್ಲಿ ಬ್ಯಾನರ್ ಅಳವಡಿಕೆ, ಅಲಂಕಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಎಸ್ಪಿಯವರಿಗೆ ಮನವಿ ಮಾಡಿದ್ದೇವೆ. ಅದನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್., ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಹಾಜರಿದ್ದರು.

ಮುಂಜಾಗ್ರತಾ ಕ್ರಮವಾಗಿ ತೆರವು : ಎಸ್ಪಿ

ಜಿಲ್ಲೆಯಾದ್ಯಂತ ವಿವಿಧ ಹಬ್ಬಗಳನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ಬ್ಯಾನರ್‌ಗಳನ್ನು ನಗರದಲ್ಲಿ ಅಳವಡಿಸಲಾಗಿದೆ. ಅದೇ ರೀತಿ ಮುಂಬರುವ ಕಾರ್ಯಕ್ರಮಗಳ ಬಗ್ಗೆಯೂ ಬ್ಯಾನರ್ ಹಾಕಲಾಗಿದೆ. ಆದುದರಿಂದ ಅನಧಿ ಕೃತ ಹಾಗೂ ಅವಧಿ ಮೀರಿದ ಬ್ಯಾನರ್‌ಗಳನ್ನು ತೆರವು ಗೊಳಿಸಲು ನಗರಸಭೆ ಅಧಿಕಾರಿಗಳಿಗೆ ರಕ್ಷಣೆ ಕೊಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದರು.

ಈ ಕುರಿತು ಈಗಾಗಲೇ ನಗರದ ಎಲ್ಲ ಕಡೆ ಪರಿಶೀಲನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಶಾಂತಿಯ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಕಡೆ ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಅವರು ಮಾಧ್ಯಮದವರಿಗೆ ತಿಳಿಸಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *