ಮಂಗಳೂರು : ಜೈಲರ್ ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬರ ಪ್ರತಿಭಟನೆ ವಿಡಿಯೋ ವೈರಲ್ – ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಬಸ್ ಅನ್ನು ಹಿಂದಿರುಗಿಸಿದ ಹಸೈನಾರ್

ಮಂಗಳೂರು : ಜೈಲರ್ ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬರ ಪ್ರತಿಭಟನೆ ವಿಡಿಯೋ ವೈರಲ್ – ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಬಸ್ ಅನ್ನು ಹಿಂದಿರುಗಿಸಿದ ಹಸೈನಾರ್

ನ್ಯೂಸ್ ಆ್ಯರೋ‌ : ಮಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಪ್ರತೀ ದಿನ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿತ್ತು. ಸಾಕಷ್ಟು ಬಾರೀ ಸರ್ವಿಸ್ ರೋಡ್ ನಲ್ಲೇ ಸಂಚರಿಸಿ ಪ್ರಯಾಣಿಕರಿಗೆ ತೊಂದರೆ ಆಗುತ್ತೆ ಎಂದು ಹಸೈನಾರ್ ಹೇಳಿದ್ದರು. ಆದರೆ ಅವರ ಮನವಿಗೆ ಕ್ಯಾರೇ ಎನ್ನದೆ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿದ್ದ ಬಸ್ಸನ್ನು ಹಸೈನಾರ್ ಅವರು ಸಿನಿಮೀಯ ರೀತಿಯಲ್ಲಿ ಬಸ್ ಅನ್ನು ಹೈವೇಯಿಂದಲೇ ವಾಪಸ್ ಕಳಿಸಿದ್ದಾರೆ

ಸ್ಥಳೀಯ ಉದ್ಯಮಿಯಾಗಿರುವ ಹಸೈನಾರ್ ರವರು ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಬಸ್ ಅನ್ನು ಹಿಂದಿರುಗಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ಬಳಿಕ ಬಸ್ ಚಾಲಕ ಅರ್ಧ ಕಿಲೋಮೀಟರ್ ರಿವರ್ಸ್ ಹೋಗಿ ಬಳಿಕ ಸರ್ವಿಸ್ ರೋಡ್ ನಲ್ಲೇ ಸಂಚರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಇನ್ನು ಜೈಲರ್ ಸಿನಿಮಾ ಸ್ಟೈಲ್ ನಲ್ಲೇ ಹಸೈನಾರ್ ಪ್ರತಿಭಟನೆ ನಡೆಸಿದ್ದಾರೆ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *