
ಮಂಗಳೂರು : ಕರಾವಳಿಯ 6 ಸಾಧಕರು ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ – ಸಿಎಂ ಸಿದ್ದರಾಮಯ್ಯ ನೇತೃತ್ವದ ಸಮಿತಿಯಿಂದ ಹೆಸರು ಫೈನಲ್
- ಕರಾವಳಿಕರ್ನಾಟಕ
- October 31, 2023
- No Comment
- 113
ನ್ಯೂಸ್ ಆ್ಯರೋ : ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ. ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಫೈನಲ್ ಮಾಡಲಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ವಿಜೇತರು ಮತ್ತು ಪ್ರಶಸ್ತಿ ವಿಜೇತ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.
ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಗೊಂಡಿದ್ದು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಾಡಿನ 68 ಮಂದಿ ಸಾಧಕರು, 10 ಸಂಘ-ಸಂಸ್ಥೆಗಳು ಪ್ರಶಸ್ತಿಗೆ ಆಯ್ಕೆಯಾಗಿವೆ.
ಕರಾವಳಿಯ ಜಿಲ್ಲೆಯಲ್ಲಿ, ಸಮಾಜ ಸೇವೆಯಲ್ಲಿ ಚಾರ್ಮಾಡಿ ಹಸನಬ್ಬ, ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ, ಆರ್ಗೋಡು ಮೋಹನ್‌ದಾಸ್ ಶೆಣೈ, ವೈದ್ಯಕೀಯ ಕ್ಶೇತ್ರದಲ್ಲಿ ಡಾ.ಪ್ರಶಾಂತ್ ಶೆಟ್ಟಿ, ಸಂಕೀರ್ಣ ಕ್ಷೇತ್ರದಲ್ಲಿ ಹಾಜಿ ಅಬ್ದುಲ್ಲಾ ಪರ್ಕಳ, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‌ಮಟ್ಟು ಪ್ರಶಸ್ತಿ ಲಭಿಸಿದೆ.
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆ ದಕ್ಷಿಣ ಕನ್ನಡದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮತ್ತು ಮಾರುತಿ ಜನಸೇವಾ ಸಂಘಕ್ಕೆ ಪ್ರಶಸ್ತಿ ಲಭಿಸಿದೆ.
ಸಂಗೀತ, ನೃತ್ಯ, ಚಲನಚಿತ್ರ, ರಂಗಭೂಮಿ, ಶಿಲ್ಪಕಲೆ, ಚಿತ್ರಕಲೆ, ಕರಕುಶಲ, ಯಕ್ಷಗಾನ, ಬಯಲಾಟ, ಜನಪದ, ಸಮಾಜಸೇವೆ, ಆಡಳಿತ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ಕ್ರೀಡೆ, ನ್ಯಾಯಾಂಗ, ಪರಿಸರ, ಮಾಧ್ಯಮ, ವಿಜ್ಞಾನ ತಂತ್ರಜ್ಞಾನ, ಸ್ವಾತಂತ್ರ್ಯ ಹೋರಾಟಗಾರ, ಹೊರನಾಡು, ಗಡಿನಾಡು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು, ವಿವಿಧ ಸಂಘಟನೆಗಳನ್ನು ಗುರುತಿಸಿ ಈ ಬಾರಿ ಪ್ರಶಸ್ತಿಗೆ ಪರಿಗಣಿಸಲಾಗಿದೆ.