ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತ – ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಎಲ್ಲೋ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತ – ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಎಲ್ಲೋ ಅಲರ್ಟ್ ಘೋಷಣೆ

ನ್ಯೂಸ್ ಆ್ಯರೋ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರದಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ. 

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. 

ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಲ್ಲೂ 3 ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *