ಉಳ್ಳಾಲ : ಕಾಫಿಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ಸ್ಥಳದಲ್ಲೇ ಮತ್ತೊಬ್ಬ ಉದ್ಯಮಿ ನದಿಗೆ ಹಾರಿ ಸಾವಿಗೆ ಶರಣು – ಉದ್ಯಮಿಯ ಸಾವಿಗೆ ಕಾರಣ ನಿಗೂಢ,  ಶೋಧಕಾರ್ಯ ಆರಂಭ

ಉಳ್ಳಾಲ : ಕಾಫಿಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ಸ್ಥಳದಲ್ಲೇ ಮತ್ತೊಬ್ಬ ಉದ್ಯಮಿ ನದಿಗೆ ಹಾರಿ ಸಾವಿಗೆ ಶರಣು – ಉದ್ಯಮಿಯ ಸಾವಿಗೆ ಕಾರಣ ನಿಗೂಢ, ಶೋಧಕಾರ್ಯ ಆರಂಭ

ನ್ಯೂಸ್ ಆ್ಯರೋ : ಕಾಫಿಡೇ ಮಾಲೀಕ ಸಿದ್ದಾರ್ಥ್ ಸಾವಿಗೆ ಶರಣಾದ ಸ್ಥಳದಲ್ಲಿಯೇ ಮತ್ತೊಬ್ಬ ಉದ್ಯಮಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ.

ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಡಿಯೋ ವೀಕ್ಷಿಸಿ

ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗ ತಂತಿ ಬೇಲಿ ನಿರ್ಮಾಣ ಮಾಡಿದ ನಂತರ ಮೂರು ವರ್ಷಗಳ ಬಳಿಕ ಮತ್ತೆ ನೇತ್ರಾವತಿ ಸೇತುವೆ ಆತ್ಮಹತ್ಯೆ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಮೂರು ವರ್ಷಗಳ ಬಳಿಕ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. 2019ರಲ್ಲಿ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ನಂತರ ಈ ಸೇತುವೆಯಲ್ಲಿ ಸರಣಿ ಆತ್ಮಹತ್ಯೆಗಳಾಗಿತ್ತು. ಹೀಗಾಗಿ 2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತಡೆಬೇಲಿಯನ್ನು ಅಳವಡಿಸಿತ್ತು.

2020ರ ನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿದ್ದವು. ಆದರೆ, ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆತ್ಮಹತ್ಯೆ ಮೂಲಕ ನೇತ್ರಾವತಿ ಸೇತುವೆ ಸುದ್ದಿಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೈದ ವ್ಯಕ್ತಿಗಾಗಿ ಶೋಧ ಕಾರ್ಯ ಆರಂಭಗೊಂಡಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *