Mangalore : ಹಮಾಸ್ ಉಗ್ರರಿಗೆ ಬೆಂಬಲಿಸಿ ವಿಡಿಯೋ ಮಾಡಿದ್ದ ವ್ಯಕ್ತಿ ಅರೆಸ್ಟ್ – ವಿಡಿಯೋ ವೈರಲ್ ಬೆನ್ನಲ್ಲೇ ಸುಮೊಟೊ ಪ್ರಕರಣ ದಾಖಲಿಸಿದ ಪೋಲಿಸರು

Mangalore : ಹಮಾಸ್ ಉಗ್ರರಿಗೆ ಬೆಂಬಲಿಸಿ ವಿಡಿಯೋ ಮಾಡಿದ್ದ ವ್ಯಕ್ತಿ ಅರೆಸ್ಟ್ – ವಿಡಿಯೋ ವೈರಲ್ ಬೆನ್ನಲ್ಲೇ ಸುಮೊಟೊ ಪ್ರಕರಣ ದಾಖಲಿಸಿದ ಪೋಲಿಸರು

ನ್ಯೂಸ್ ಆ್ಯರೋ : ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನ ಹಮಾಸ್ ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಉಗ್ರರನ್ನು ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಬಂಧಿತ ಆರೋಪಿ.

ಹಮಾಸ್ ಉಗ್ರರನ್ನು ಬೆಂಬಲಿಸಿ, ಪ್ಯಾಲೆಸ್ಟೀನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ಜಾಕಿರ್ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಕೃತ್ಯದ ಬಗ್ಗೆ ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿ ಆರೋಪಿ ಜಾಕಿರ್ ಯಾನ ಜಾಕಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇನ್ನು ಈ ಆರೋಪಿತನ ಮೇಲೆ ಈ ಹಿಂದ ಕೂಡ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ನಗರ ಪೋಲಿಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *