ಮಂಗಳೂರಿನ ವಿಮಾನ ನಿಲ್ದಾಣ ಅದಾನಿ ಗ್ರೂಪ್ ಪಾಲು – ಯಾವೆಲ್ಲ ವಿಮಾನ ನಿಲ್ದಾಣಗಳು ಅದಾನಿ ವಶಕ್ಕೆ ಸೇರಿದೆ ಗೊತ್ತಾ?

ಮಂಗಳೂರಿನ ವಿಮಾನ ನಿಲ್ದಾಣ ಅದಾನಿ ಗ್ರೂಪ್ ಪಾಲು – ಯಾವೆಲ್ಲ ವಿಮಾನ ನಿಲ್ದಾಣಗಳು ಅದಾನಿ ವಶಕ್ಕೆ ಸೇರಿದೆ ಗೊತ್ತಾ?

ನ್ಯೂಸ್ ಆ್ಯರೋ : ಮೂರು ವರ್ಷದ ಬಳಿಕ ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಅದಾನಿ ಗ್ರೂಪ್‌ಗೆ ವಶಕ್ಕೆ ಪಡೆಯಿತು.

2020 ಅ.31ರಂದು ಮಂಗಳೂರು ಸೇರಿದಂತೆ ದೇಶದ 6 ವಿಮಾನ ನಿಲ್ದಾಣಗಳ ಆಡಳಿತವನ್ನು ದೇಶದ ಪ್ರತಿಷ್ಠಿತ ಉದ್ದಿಮೆ ಕಂಪನಿ ಅದಾನಿ ತನ್ನ ವಶಕ್ಕೆ ಪಡೆದುಕೊಂಡಿತ್ತು. ಕೇಂದ್ರ ಸರ್ಕಾರ ಖಾಸಗಿ ರಂಗದ ಮೂಲಕ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ತೆಗೆದುಕೊಂಡ ನಿರ್ಧಾರದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಒಪ್ಪಂದದ ಪ್ರಕಾರ ಮೂರು ವರ್ಷಗಳ ವರೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅರ್ಧದಷ್ಟು ಸಿಬ್ಬಂದಿ ಹಾಗೂ ಅದಾನಿ ಸಿಬ್ಬಂದಿ ಜತೆಯಾಗಿಯೇ ಕೆಲಸ ಮಾಡಬೇಕಿತ್ತು. ಇದೀಗ ಒಪ್ಪಂದದ ಪ್ರಕಾರ ಅಕ್ಟೋಬರ್ 30ಕ್ಕೆ ಅವಧಿ ಮುಗಿದಿದ್ದು, ಇಡೀ ವಿಮಾನ ನಿಲ್ದಾಣ ಆಡಳಿತ ಅದಾನಿ ವಶಕ್ಕೆ ಹೋಗಿದೆ.

ಯಾವೆಲ್ಲ ವಿಮಾನ ನಿಲ್ದಾಣ ಅದಾನಿ ವಶಕ್ಕೆ ಹೋಗಲಿದೆ?

ದೇಶದ ಆರು ವಿಮಾನ ನಿಲ್ದಾಣಗಳ ಪೈಕಿ ಮಂಗಳೂರು ವಿಮಾನ ನಿಲ್ದಾಣ ಪ್ರಥಮವಾಗಿ ಅದಾನಿ ಕೈ ವಶವಾಗಿತ್ತು. ಆ ಬಳಿಕ ಅಹಮ್ಮದಾಬಾದ್‌, ಲಕ್ನೋ, ಜೈಪುರ, ಗುವಾಹಟಿ ಹಾಗೂ ತ್ರಿವೆಂಡ್ರಂ ವಿಮಾನ ನಿಲ್ದಾಣಗಳನ್ನು ಅದಾನಿ ತೆಕ್ಕೆಗೆ ತೆಗೆದುಕೊಂಡಿತ್ತು. ಮುಂಬೈ ವಿಮಾನ ನಿಲ್ದಾಣವನ್ನು 2020 ಜುಲೈನಲ್ಲಿ ಅದಾನಿ ಕಂಪನಿ ಜಿವಿಕೆ ಕೈನಿಂದ ತೆಗೆದುಕೊಂಡಿತ್ತು. ಪ್ರಸಕ್ತ ಮುಂಬೈನಲ್ಲಿ ಅದಾನಿ ಗ್ರೂಪ್‌ನ ಹೊಸ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, 2024ರ ವೇಳೆಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ.

ಎಎಐ ಎಲ್ಲ ಸಿಬ್ಬಂದಿ ವರ್ಗಾವಣೆ

ಅದಾನಿ ತೆಕ್ಕೆಗೆ ಸೇರ್ಪಡೆಗೊಂಡ ವೇಳೆ 118 ಮಂದಿ ಎಎಐ ಸಿಬ್ಬಂದಿ ಇದ್ದರು. ಅವರಲ್ಲಿ 97 ಮಂದಿಯನ್ನು ಉಳಿಸಿಕೊಳ್ಳಲಾಗಿತ್ತು. ಇವರೆಲ್ಲ ಎಜಿಎಂ ಹಾಗೂ ಕೆಳಗಿನ ಹಂತದವರು. ಅವರೆಲ್ಲ ಹಣಕಾಸು, ಎಚ್‌ಆರ್‌, ಆಡಳಿತ, ವಾಣಿಜ್ಯ, ಅಗ್ನಿಶಾಮಕ, ಟರ್ಮಿನಲ್‌ ಸೇರಿದಂತೆ ಆರು ವಿಭಾಗಗಳಲ್ಲಿ ಅದಾನಿ ಸಿಬ್ಬಂದಿಯೊಂದಿಗೆ ಜತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಒಪ್ಪಂದ ಅವಧಿ ಮುಕ್ತಾಯಗೊಳ್ಳುತ್ತಿರುವುದರಿಂದ ಈಗ ಈ 97 ಮಂದಿಯನ್ನು ಬೇರೆ ಬೇರೆ ವಿಮಾನ ನಿಲ್ದಾಣಗಳಿಗೆ ವರ್ಗಾವಣೆಗೊಳಿಸಲಾಗಿದೆ.

ಇನ್ನು ಈ ಆರು ವಿಭಾಗ ಕೂಡ ಅದಾನಿ ಆಡಳಿತಕ್ಕೆ ಒಳಪಡಲಿದೆ. ಏರ್‌ಟ್ರಾಫಿಕ್‌ ಕಂಟ್ರೋಲ್‌(ಎಟಿಸಿ), ಕಾರ್ಗೊ ಹಾಗೂ ಸಿಎನ್‌ಎಸ್‌ (ಕಮ್ಯುನಿಕೇಷನ್‌ ನೇವಿಗೇಷನ್‌ ಅಂಡ್‌ ಸರ್ವೆಲೆನ್ಸ್‌) ಮಾತ್ರ ಅದಾನಿ ಹೊರತಾಗಿ ಇರಲಿದೆ. ಆದರೆ ವಿಮಾನ ನಿಲ್ದಾಣದ ಹೆಸರಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ವಿಮಾನ ನಿಲ್ದಾಣ ಮೂಲಗಳು ಸ್ಪಷ್ಟಪಡಿಸಿವೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *