
Mangalore : ಮುಂದುವರೆದ ಸಿಸಿಬಿ ಪೋಲಿಸರ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ – ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯ ಸೆರೆ
- ಕರಾವಳಿ
- October 21, 2023
- No Comment
- 42
ನ್ಯೂಸ್ ಆ್ಯರೋ : ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುಲ್ ಅಜೀಜ್ ಅಲಿಯಾಸ್ ಪೋಕರ್ ಅಜೀಜ್(42), ವಾಸ: ರಮ್ಲ ಮಂಜೀಲ್, ತೌಡುಗೋಳಿ ಕ್ರಾಸ್, ಪೋಸ್ಟ್ ನರಿಂಗಾನ, ಉಳ್ಳಾಲ ತಾಲೂಕು, ಮಂಗಳೂರು ಎಂದು ಗುರುತಿಸಲಾಗಿದೆ.
ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,41,500/- ಎಂದು ಅಂದಾಜಿಸಲಾಗಿದೆ.
ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತದೆ. ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಅಲ್ಲಿಯ ಕಾರಾಗೃಹ ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.