
ಮಂಗಳೂರು ಕಮಿಷನರ್ ಕುಲದೀಪ್ ಜೈನ್ ದಿಢೀರ್ ವರ್ಗಾವಣೆ – ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕ
- ಕರಾವಳಿ
- September 5, 2023
- No Comment
- 41
ನ್ಯೂಸ್ ಆ್ಯರೋ : ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.
ಮಾಜಿ ಕಮೀಷನರ್ ಎನ್. ಶಶಿಕುಮಾರ್ ಬಳಿಕ ಆರು ತಿಂಗಳ ಕಾಲ ಕಮೀಷನರ್ ಆಗಿ ಅಧಿಕಾರ ವಹಿಸಿಕೊಂಡು, ಟ್ರಾಫಿಕ್ ನಲ್ಲಿ ಬದಲಾವಣೆ ತಂದು ಡ್ರಗ್ಸ್ ಜಾಲದ ವಿರುದ್ಧ ಸಮರ ಸಾರಿದ್ದ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಯಾವುದೇ ಸ್ಥಳ ಗುರುತಿಸದೇ ದಿಢೀರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಕುಲದೀಪ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿರುವ ಸರ್ಕಾರ ಆಡಳಿತ ಇಲಾಖೆಗೆ ಮೇಜರ್ ಸರ್ಜರಿ ಮಾಡಿ ಆದೇಶ ಹೊರಡಿಸಿದೆ.
ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅಲ್ಲದೇ ಕಂಠೀರವ ಕ್ರೀಡಾಂಗಣದಲ್ಲಿ ಪತ್ನಿಯ ಜೊತೆ ಸೇರಿ ಅತ್ಲೀಟ್ ಗಳ ಮೇಲೆ ಹಲ್ಲೆ ಮಾಡುವ ಮೂಲಕ ಕೆಟ್ಟ ಕಾರಣಕ್ಕೆ ಪ್ರಚಾರ ಪಡೆದಿದ್ದರು.