ಮಂಗಳೂರು ವಿವಿ ಹಿರಿಯ ಪ್ರಾಧ್ಯಾಪಕ ಡಾ. ಉದಯ ಬಾರ್ಕೂರು ಹೃದಯಾಘಾತದಿಂದ ನಿಧನ

ಮಂಗಳೂರು ವಿವಿ ಹಿರಿಯ ಪ್ರಾಧ್ಯಾಪಕ ಡಾ. ಉದಯ ಬಾರ್ಕೂರು ಹೃದಯಾಘಾತದಿಂದ ನಿಧನ

ನ್ಯೂಸ್ ಆ್ಯರೋ‌ : ಮಂಗಳೂರು ವಿಶ್ವ ವಿದ್ಯಾನಿಲಯದ ಇತಿಹಾಸ ವಿಭಾಗದ ಹಿರಿಯ ಪ್ರಧ್ಯಾಪಕ ಡಾ.ಉದಯ ಬಾರ್ಕೂರು (59)‌ ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

34 ವರ್ಷಗಳಿಂದ ಬೋಧನೆ

ಡಾ. ಉದಯ 34 ವರ್ಷಗಳಿಂದ ಇತಿಹಾಸ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ, ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದರು.

2017ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾಧ್ಯಾಪಕ ಪ್ರಶಸ್ತಿ ಪಡೆದುಕೊಂಡಿದ್ದ ಅವರು ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದರು. ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದರು.

ವಿವಿಯ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಇತ್ತೀಚೆಗೆ ಆಯ್ಕೆಗೊಂಡಿದ್ದ ಡಾ. ಉದಯ ಅನೇಕ ಇತಿಹಾಸ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ ಅನೇಕ ಪಿ.ಎಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *