ಧರ್ಮಸ್ಥಳ : ಲಾಡ್ಜ್ ನಲ್ಲಿ ತಂಗಲು ಯತ್ನಿಸುತ್ತಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿ – ಸಾರ್ವಜನಿಕರಿಂದ ತರಾಟೆ, ಜೋಡಿ ಪೋಲಿಸ್ ವಶಕ್ಕೆ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚು ಎಂಬ ಆರೋಪಗಳ ನಡುವೆ ಮತ್ತೆ ಅನ್ಯಕೋಮಿನ ಜೋಡಿಯೊಂದು ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ.

ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಧರ್ಮಸ್ಥಳದಲ್ಲಿ ಸುತ್ತಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರು ಮೂಲದ ಈ ಜೋಡಿ ಲಾಡ್ಜ್‌ ನಲ್ಲಿ ತಂಗಲು ಯತ್ನಿಸುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಸಂಶಯಗೊಂಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದು, ಈ ವೇಳೆ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಸಾರ್ವಜನಿಕರು ವಿಚಾರಿಸಿದಾಗ ಇದು ಅನ್ಯಕೋಮಿನ ಜೋಡಿ ಎಂದು ತಿಳಿದಾಗ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾದ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ.