ಉಳ್ಳಾಲ : ಉಳ್ಳಾಲ ತೌಡುಗೋಳಿ ನಿವಾಸಿ ನವವಿವಾಹಿತೆ ಪುಣೆಯಲ್ಲಿ ಅನುಮಾನಾಸ್ಪದ ಸಾವು – ಪತಿಯ ವಿರುದ್ಧ ಅನುಮಾನ ವ್ಯಕ್ತಪಡಿಸಿದ ಪೋಷಕರು‌‌..!!

ಉಳ್ಳಾಲ : ಉಳ್ಳಾಲ ತೌಡುಗೋಳಿ ನಿವಾಸಿ ನವವಿವಾಹಿತೆ ಪುಣೆಯಲ್ಲಿ ಅನುಮಾನಾಸ್ಪದ ಸಾವು – ಪತಿಯ ವಿರುದ್ಧ ಅನುಮಾನ ವ್ಯಕ್ತಪಡಿಸಿದ ಪೋಷಕರು‌‌..!!

ನ್ಯೂಸ್ ಆ್ಯರೋ : ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರಿ ಸುಜಾತ ಶೆಟ್ಟಿ (38) ಎಂಬವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠ ಎಂಬಲ್ಲಿ ನಡೆದಿದೆ.

ಪಜೀರು ಪಾನೇಲ ನಿವಾಸಿ ಪುಣೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಸುರೇಶ್ ಕೈಯ್ಯ ಎಂಬವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ ಸುಜಾತಾ ಅವರನ್ನು ವಿವಾಹ ಮಾಡಿಕೊಡಲಾಗಿತ್ತು.

ಅ.8 ರಂದು ಸುಜಾತ ಮೃತದೇಹ ಭಾರತೀಯ ವಿದ್ಯಾಪೀಠದಲ್ಲಿರುವ ಮನೆಯೊಳಗೆ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು.

ಈ ಬಗ್ಗೆ ಅಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಶವ ಮಹಜರಿಗೆ ಕಳುಹಿಸಲಾಗಿತ್ತು. ಅ.9 ರಂದು ತೌಡುಗೋಳಿ ಸಮೀಪ ಸುಜಾತ ಅವರ ಅಂತಿಮ ಸಂಸ್ಕಾರ ನೆರವೇರಿದ್ದು, ಮನೆಮಂದಿ ಸುರೇಶ್ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

ಸುಜಾತಾ ಅವರು ತೊಕ್ಕೊಟ್ಟು ಬ್ಯೂಟಿಪಾರ್ಲರ್ ನಲ್ಲಿ ಈ ಹಿಂದೆ ಬ್ಯೂಟೀಷಿಯನ್ ಆಗಿ ಕೆಲಸ‌ ನಿರ್ವಹಿಸುತ್ತಿದ್ದರು. ಶವಮಹಜರು ವರದಿ ಬಂದ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *