No Horn Zone : ಇನ್ಮುಂದೆ ಮಂಗಳೂರಿನಲ್ಲಿ ಎಲ್ಲಾ ಕಡೆ ಹಾರ್ನ್ ಹಾಕುವಂತಿಲ್ಲ – ನಿಷೇಧಿತ ಪ್ರದೇಶಗಳು ಯಾವುವು ಗೊತ್ತಾ?

No Horn Zone : ಇನ್ಮುಂದೆ ಮಂಗಳೂರಿನಲ್ಲಿ ಎಲ್ಲಾ ಕಡೆ ಹಾರ್ನ್ ಹಾಕುವಂತಿಲ್ಲ – ನಿಷೇಧಿತ ಪ್ರದೇಶಗಳು ಯಾವುವು ಗೊತ್ತಾ?

ನ್ಯೂಸ್ ಆ್ಯರೋ : ಮಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಈ ಕೆಳಕಂಡ ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” (No Horn Zone) ಎಂದು ಘೋಷಿಸಲಾಗಿದೆ.

ಘೋಷಿತ ಪ್ರದೇಶಗಳ ವಿವರ:-

1) ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲಿನ ಪ್ರದೇಶ :-
I. ರಾವ್ & ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.
II. ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್ ವರೆಗೆ.
III. ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ.

2) ಹಂಪನಕಟ್ಟೆ ಜಂಕ್ಷನ್‌:-

I. ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್ ವರೆಗಿನ ಪ್ರದೇಶ.
II. ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್ (Causality Gate) ನಿಂದ ಮುತ್ತಪ್ಪ ಗುಡಿಯ ವರೆಗೆ.
III. ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನ ಸೌಧ ಕಟ್ಟಡದ ವರೆಗೆ.

3) ಡಾ. ಅಂಬೇಡ್ಕರ್ ವೃತ್ತದ ಸುತ್ತಲಿನ ಪ್ರದೇಶ:-

I. ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
II. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
III. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
IV. ಬಾವುಟಗುಡ್ಡ (ಮಹಿಳಾ ಸಭಾ ಕಟ್ಟಡ) ದಿಂದ ಅಂಬೇಡ್ಕರ್ ವೃತ್ತದ ವರೆಗೆ.

4) ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್( ಅತ್ತಾವರ ನ್ಯೂ ರೋಡ್) ತಿರುವಿನವರೆಗೆ.

5) ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ.

6) ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ.

ವಾಹನ ಚಾಲಕರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ.

ಭಾರತೀಯ ಮೋಟಾರು ವಾಹನ ಅಧಿನಿಯಮ (ತಿದ್ದುಪಡಿ) 2019 ರ ಕಲಂ 194 (ಎಫ್) ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ ರೂ 1000/- ದಂಡವನ್ನು ಹಾಗೂ ಎರಡನೆಯ ಹಾಗೂ ತದನಂತರದ ಪ್ರತಿ ಉಲ್ಲಂಘನೆಗೆ ರೂ 2000/- ದಂಡವನ್ನು ವಿಧಿಸಲಾಗುವುದು.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *