Mangalore : ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ – ವಿಡಿಯೋ ವೈರಲ್ ಬೆನ್ನಲ್ಲೇ ಕಿಡಿಗೇಡಿಗಳ ವಿರುದ್ಧ ನೋಟಿಸ್ ಜಾರಿ

Mangalore : ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ – ವಿಡಿಯೋ ವೈರಲ್ ಬೆನ್ನಲ್ಲೇ ಕಿಡಿಗೇಡಿಗಳ ವಿರುದ್ಧ ನೋಟಿಸ್ ಜಾರಿ

ನ್ಯೂಸ್ ಆ್ಯರೋ‌ : ಇತ್ತೀಚೆಗೆ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿ ನೋಟಿಸ್ ಜಾರಿ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ನೂರಾರು ಯುವಕರು ಅಬ್ಬಕ್ಕ ಸರ್ಕಲ್ ಹತ್ತಿ ಪ್ರತಿಮೆ ಎದುರು ಹಸಿರು ಬಾವುಟ ಪ್ರದರ್ಶಿಸಿ ಚೀರಾಡುತ್ತಾ ಪುಂಡಾಟ ಮೆರೆದಿದ್ದರು. ಅಲ್ಲದೆ, ರಸ್ತೆ ಬಂದ್ ಮಾಡಿ ಬೈಕ್ ಹಾರ್ನ್ ಹಾಕಿಕೊಂಡು ಹುಚ್ಚಾಟ ಮೆರೆದಿದ್ದರು.

ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ಗಮನಿಸಿದ ಉಳ್ಳಾಲ ಠಾಣಾ ಪೊಲೀಸರು, ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿದ್ದಾರೆ. ಪುಂಡಾಟ ಮೆರೆದವರು ಮಂಜನಾಡಿ, ಮದಕ, ಬಂಟ್ವಾಳ, ಬೆಳ್ತಂಗಡಿ, ದೇರಳಕಟ್ಟೆ, ಕೊಣಾಜೆ ಹಾಗೂ ಉಳ್ಳಾಲ ಭಾಗದ ಯುವಕರು ಎಂದು ತಿಳಿದುಬಂದಿದೆ.

ಸದ್ಯ ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಯುವಕರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ‌ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲೂ ಇಂತಹದ್ದೇ ಘಟನೆ ನಡೆದಿದ್ದು ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *