Mangalore : ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ರಕ್ತಚಂದನ ವಶ – ಬರೋಬ್ಬರಿ 28 ಕೋಟಿ ರೂಪಾಯಿ ಹರಾಜು

Mangalore : ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ರಕ್ತಚಂದನ ವಶ – ಬರೋಬ್ಬರಿ 28 ಕೋಟಿ ರೂಪಾಯಿ ಹರಾಜು

ನ್ಯೂಸ್ ಆ್ಯರೋ : ಮಂಗಳೂರು ಬಂದರಿನ ಕಸ್ಟಮ್ಸ್‌ ಅಧಿಕಾರಿಗಳು 2008ರಿಂದ 2023ರ ವರೆಗೆ ನಾಲ್ಕು ಪ್ರತ್ಯೇಕ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ರಕ್ತಚಂದನವನ್ನು ಆನ್‌ಲೈನ್‌ನಲ್ಲಿ ಬರೋಬ್ಬರಿ ₹28 ಕೋಟಿಗೆ ಹರಾಜು ಮಾಡಲಾಗಿದೆ.

ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಾಜ್ಯ ಅರಣ್ಯ ಇಲಾಖೆ ಆನ್‌ಲೈನ್ ಮೂಲಕ ಹರಾಜು ಹಾಕಿದೆ. ಅದರಂತೆ ಒಟ್ಟು 2,094 ದಿಮ್ಮಿಗಳನ್ನು ಒಳಗೊಂಡ 56.2 ಮೆಟ್ರಿಕ್ ಟನ್ ರಕ್ತಚಂದನವಿತ್ತು. ಎ ಕೆಟಗರಿ 3 ಲಾಟ್, ಬಿ ಕೆಟಗರಿ 6 ಲಾಟ್, ಸಿ ಕೆಟಗರಿ 6 ಲಾಟ್, ಡಿ ಕೆಟಗರಿ 3 ಲಾಟ್‌ ಗಳಾಗಿ ವಿಂಗಡಣೆ ಮಾಡಿ ಹರಾಜು ಹಾಕಲಾಗಿದೆ.

ಆನ್‌ಲೈನ್‌ನಲ್ಲಿ 3 ಪ್ರತಿಷ್ಠಿತ ಏಜೆನ್ಸಿಗಳು ಬರೋಬ್ಬರಿ ₹ 28 ಕೋಟಿಗೆ ಬಿಡ್ ಮಾಡಿವೆ. ಮಂಗಳೂರಿನ ಪಣಂಬೂರು ಬಂದರಿನ ಕಸ್ಟಮ್ಸ್‌ ಅಧಿಕಾರಿಗಳು 2008 ರಿಂದ 2023 ರವರೆಗೆ 4 ಪ್ರತ್ಯೇಕ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ರಕ್ತ ಚಂದನ ಇದಾಗಿತ್ತು. ಮಂಗಳೂರು ಬಂದರಿನಿಂದ ಅಕ್ರಮವಾಗಿ ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿದ್ದ ರಕ್ತಚಂದನ ಮಾಲು ಇದಾಗಿತ್ತು.

ಚೀನಾ, ದುಬೈ, ಜಪಾನ್ ಸೇರಿದಂತೆ ಇತರ ದೇಶಗಳಲ್ಲಿ ರಕ್ತಚಂದನಕ್ಕೆ ಬಹು ಬೇಡಿಕೆ ಇದೆ. 2012 ಆಗಸ್ಟ್​​ 24ರಂದು ನವಮಂಗಳೂರು ಬಂದರು ಮೂಲಕ ಈ ಮಾಲು ದುಬೈಗೆ ಕಳ್ಳಸಾಗಾಟವಾಗುವುದಿತ್ತು. ಕಂಟೈನರ್‌ನಲ್ಲಿ ತುಂಬಿಸಿಡಲಾಗಿದ್ದ 5,810 ಕೆ.ಜಿ. ತೂಕದ ರಕ್ತಚಂದನ ವಶಕ್ಕೆ ಪಡೆದಿದ್ದರು. 2014 ಆಗಸ್ಟ್​ 21ರಂದು ವಿದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 16.99 ಟನ್ ರಕ್ತಚಂದನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇನ್ನು, 2020ರ ಜನವರಿ 10ರಂದು ಥಾಯ್ಲೆಂಡ್‌ಗೆ ಸಾಗಿಸಲು ಯತ್ನಿಸುತ್ತಿದ್ದ ₹2.20 ಕೋಟಿ ಮೌಲ್ಯದ ರಕ್ತಚಂದನವನ್ನೂ ವಶ ಪಡಿಸಿಕೊಳ್ಳಲಾಗಿತ್ತು. 2022ರ ಜೂನ್ 3ರಂದು ಆಂಧ್ರಪ್ರದೇಶದ ತಿರುಪತಿಯಿಂದ ಮಂಗಳೂರು ಮೂಲಕ ಸಿಂಗಾಪುರಕ್ಕೆ ಸಾಗಿಸಲು ಯತ್ನಿಸುತ್ತಿದ್ದ₹ 4.14 ಕೋಟಿ ಮೌಲ್ಯದ ರಕ್ತಚಂದನ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ವಶವಾಗಿತ್ತು. ಒಟ್ಟು ನಾಲ್ಕು ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ರಕ್ತಚಂದನವನ್ನು ಹರಾಜು ಮಾಡಿದ್ದಾರೆ.

Related post

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ –…

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ…
ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್…

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ…

Leave a Reply

Your email address will not be published. Required fields are marked *