ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದೇ ವೇಳೆ ರಚಿತಾ ರಾಮ್ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ರಚಿತಾ ರಾಮ್ “ನನ್ನ ಸ್ನೇಹಿತರ ಪೈಕಿ ಅನೇಕ ಮಂದಿ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ತಿಳಿಸಿದ್ದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು. ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯದಿಂದ‌ ಕೂಡಿದ್ದು, ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ’ ಎಂದು ರಚಿತಾರಾಮ್ ಹೇಳಿದರು.

ಈ‌ ಸಂದರ್ಭದಲ್ಲಿ ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು. ಮಂಗಳೂರಿನ ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ, ಆಶ್ರಿತಾ ಶೆಟ್ಟಿ, ಟ್ರಸ್ಟಿಗಳಾದ ಮಹಾಬಲ್ ಹೆಗ್ಡೆ , ಪ್ರೀತಮ್ ಶೆಟ್ಟಿ ಅಲ್ಲದೇ ಇತರರು ಉಪಸ್ಥಿತರಿದ್ದರು.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *