
ಉಡುಪಿ : ತಾಯಿ ಸಹಿತ ನಾಲ್ವರ ಕೊಲೆ ಪ್ರಕರಣ – ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ಸುಮೊಟೊ ಕೇಸ್ ದಾಖಲು
- ಕರಾವಳಿ
- November 20, 2023
- No Comment
- 51
ನ್ಯೂಸ್ ಆ್ಯರೋ : ಉಡುಪಿ ನೇಜಾರಿನಲ್ಲಿ ತಾಯಿ ಸಹಿತ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾನೆ. ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗುಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಘಟನೆ ಉಲ್ಲೇಖಿಸಿ, ಪೋಸ್ಟ್ ಹಾಕಿದ್ದಾನೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ಎಂಬಾತನ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 155, 505(2) ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಹಫೀಜ್ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನ.12ರಂದು ಉಡುಪಿ ಜಿಲ್ಲೆಯ ನೇಜಾರು ಮನೆಗೆ ನುಗ್ಗಿದ್ದ ಪ್ರವೀಣ್ ಚೌಗಲೆ ಎಂಬಾತ ನಾಲ್ವರನ್ನು ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದ. ಕೃತ್ಯದ ಬಳಿಕ ಬೆಳಗಾವಿಯ ಕುಡುಚಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪ್ರವೀಣ್ ಚೌಗಲೆಯನ್ನು ಉಡುಪಿ ಪೊಲಿಸರು ಬಂಧಿಸಿ ತನಿಖೆ ನಡೆಸಿದ್ದಾರೆ. ಈ ಮಧ್ಯೆ ಹತ್ಯೆ ಪ್ರಕರಣದ ಬಗ್ಗೆ ಹಫೀಜ್ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ.