Mangalore : Instagram ಪರಿಚಯ, ಲಾಡ್ಜ್ ಗೆ ಕರೆದೊಯ್ದು 20 ದಿನಗಳ ಕಾಲ ನಿರಂತರ ದೈಹಿಕ ಸಂಪರ್ಕ – ವಿದ್ಯಾರ್ಥಿನಿಯಿಂದ ದೂರು, ಕಡಬ ಮೂಲದ ಆರೋಪಿಯ ಬಂಧನ

Mangalore : Instagram ಪರಿಚಯ, ಲಾಡ್ಜ್ ಗೆ ಕರೆದೊಯ್ದು 20 ದಿನಗಳ ಕಾಲ ನಿರಂತರ ದೈಹಿಕ ಸಂಪರ್ಕ – ವಿದ್ಯಾರ್ಥಿನಿಯಿಂದ ದೂರು, ಕಡಬ ಮೂಲದ ಆರೋಪಿಯ ಬಂಧನ

ನ್ಯೂಸ್ ಆ್ಯರೋ‌ : ಇನ್ಸ್ಟಾಗ್ರಾಮ್ ನಲ್ಲಿ ಪರಿಚಿತನಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ಸತತ 20 ದಿನಗಳ ಕಾಲ ಹೋಟೆಲ್ ರೂಂ ನಲ್ಲಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟಿದ್ದಾನೆ ಎಂದು‌ ಬಂಟ್ವಾಳದ ವಿದ್ಯಾರ್ಥಿನಿಯೊಬ್ಬಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ವಿವರ

ಬಂಟ್ವಾಳ ಮೂಲದ ಮುಸ್ಲಿಂ ಯುವತಿ ಮಂಗಳೂರಿನಲ್ಲಿ ಸ್ನಾತಕೋತ್ತರ ವ್ಯಾಸಂಗ‌ ಮಾಡುತ್ತಿದ್ದು, ಈ ವೇಳೆ ಕಡಬ ಮೂಲದ ಅನೀಸ್ ರೆಹಮಾನ್ ಎಂಬಾತನನ್ನು ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ ಅನೀಸ್ ರೆಹಮಾನ್ ಮೇ 28ರಂದು ಮಂಗಳೂರಿನ ಪೂಂಜಾ ಇಂಟರ್ನ್ಯಾಷನಲ್ ಹೊಟೇಲ್ ಗೆ ಕರೆಸಿಕೊಂಡು ನಿರಂತರ 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಆದರೆ ಬಳಿಕ ಆತ ಈಗಾಗಲೇ ಮದುವೆಯಾಗಿರುವ ವಿಚಾರ ಯುವತಿಗೆ ತಿಳಿದಿದೆ.

ತಾನು ಮೋಸ ಹೋಗಿದ್ದು ಅರಿವಾಗುತ್ತಿದ್ದಂತೆ ಮಹಿಳೆ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಮಹಿಳಾ ಪೋಲಿಸ್ ಠಾಣೆಯಲ್ಲಿ ಅಕ್ರ.52/2023 ರಂತೆ ಐಪಿಸಿ ಸೆಕ್ಷನ್ 417,376,506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿನಿ ನೀಡಿದ ದೂರಿನಂತೆ ಆರೋಪಿ ಅನೀಸ್ ನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೇ ಈ ಹಿಂದೆ ಆರೋಪಿಯ ವಿರುದ್ಧ ಕಾವೂರು ಪೋಲಿಸ್ ಠಾಣೆಯಲ್ಲಿ ಗಾಂಜಾ ಸೇವನೆ‌ ಪ್ರಕರಣವೂ ದಾಖಲಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *