ಮಂಗಳೂರಿನ ಜನತೆಗೂ ಸಿಗಲಿದೆ ವಂದೇ ಭಾರತ್ ರೈಲು ಸೇವೆ – ಕೇಂದ್ರ ಸರ್ಕಾರದಿಂದ ದಕ್ಷಿಣ ರೈಲ್ವೆಗೆ ಮತ್ತೊಂದು ಕೊಡುಗೆ

ಮಂಗಳೂರಿನ ಜನತೆಗೂ ಸಿಗಲಿದೆ ವಂದೇ ಭಾರತ್ ರೈಲು ಸೇವೆ – ಕೇಂದ್ರ ಸರ್ಕಾರದಿಂದ ದಕ್ಷಿಣ ರೈಲ್ವೆಗೆ ಮತ್ತೊಂದು ಕೊಡುಗೆ

ನ್ಯೂಸ್ ಆ್ಯರೋ :‌ ಭಾರತದ ರೈಲು ಸಾರಿಗೆಯಲ್ಲಿ ಹೊಸ ಸಂಚಲನ ಮೂಡಿಸಿದ ವಂದೇ ಭಾರತ್ ರೈಲು ಸೇವೆ ಪಾಲಕ್ಕಾಡ್-ದಕ್ಷಿಣ ರೈಲ್ವೆಗೆ ಸಿಗುವ ಮೂಲಕ ಕರಾವಳಿ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ.

ಈ ರೈಲು ಶುಕ್ರವಾರ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಿಂದ ಮಂಗಳೂರಿಗೆ ಹೊರಟಿದ್ದು ಈ ಮೂಲಕ ಪಾಲಕ್ಕಾಡ್ ವಿಭಾಗದ ಎಂಜಿನಿಯರ್‌ಗಳಿಗೆ ಹಸ್ತಾಂತರಿಸಲಾಯಿತು.

ಕೇರಳಕ್ಕೆ ರೈಲು ಮಂಜೂರು ಮಾಡಿರುವುದು ದೃಢಪಟ್ಟಿದೆ. ರೈಲನ್ನು ಪಾಲಕ್ಕಾಡ್ ವಿಭಾಗಕ್ಕೆ ಹಸ್ತಾಂತರಿಸಲಾಗಿದ್ದರೂ, ಮಾರ್ಗಗಳು ಇನ್ನೂ ಅಂತಿಮಗೊಂಡಿಲ್ಲ. ವರದಿಗಳ ಪ್ರಕಾರ, ಒಂದು ವಾರದಲ್ಲಿ ಮಾರ್ಗಗಳನ್ನು ಖಚಿತಪಡಿಸಲಾಗುವುದು. ಮಂಗಳೂರು-ತಿರುವನಂತಪುರಂ, ಮಂಗಳೂರು-ಎರ್ನಾಕುಲಂ, ಮಂಗಳೂರು-ಕೊಯಮತ್ತೂರು ಮತ್ತು ಗೋವಾ-ಎರ್ನಾಕುಲಂ ಸೇರಿದಂತೆ ಸಂಭಾವ್ಯ ಮಾರ್ಗಗಳನ್ನು ಪರಿಗಣಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚೆನ್ನೈನಲ್ಲಿ ವಂದೇ ಭಾರತ್‌ ಲೋಕೋ ಪೈಲಟ್‌ಗಳಿಗೆ ತರಬೇತಿ ಕೂಡ ಆರಂಭವಾಗಿದೆ. ಮಂಗಳೂರಿನಲ್ಲಿ ಪಿಟ್‌ಲೈನ್ ಕೂಡ ಸ್ಥಾಪಿಸಲಾಗಿದೆ. ಈಗಾಗಲೇ ಸೇವೆಯಲ್ಲಿರುವ ಮೊದಲ ಕೇರಳದ ವಂದೇ ಭಾರತ್ (20634) ತಿರುವನಂತಪುರದಿಂದ ಬೆಳಿಗ್ಗೆ 5:20 ಕ್ಕೆ ಹೊರಟು ಮಧ್ಯಾಹ್ನ 1:20 ಕ್ಕೆ ಕಾಸರಗೋಡು ತಲುಪುತ್ತದೆ. ವರದಿಗಳ ಪ್ರಕಾರ, ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಅದೇ ಸಮಯದಲ್ಲಿ ತನ್ನ ಪ್ರಯಾಣವನ್ನು ಪುನರಾರಂಭಿಸುತ್ತದೆ.

ಮಂಗಳೂರಿನಲ್ಲಿ ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ನಿರ್ವಹಣಾ ಘಟಕ ತಲೆ ಎತ್ತಲಿದೆ ಎಂದು ಕೂಡ ಹೇಳಲಾಗುತ್ತಿದೆ. ತಿರುವನಂತಪುರಂ – ಮಂಗಳೂರು ನಡುವೆ ಶೀಘ್ರದಲ್ಲೇ ಕಾರ್ಯಾಚರಣೆ ಶುರುವಾಗುವ ನಿರೀಕ್ಷೆಯಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ. ಮುಖ್ಯವಾಗಿ, ತಿರುವನಂತಪುರಂ-ಕಣ್ಣೂರು ಶತಾಬ್ದಿ (ರೈಲು ಸಂಖ್ಯೆ 12082) ಮತ್ತು ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ (ಗಾಡಿ ಸಂಖ್ಯೆ 16307) ರೈಲುಗಳ ಸಮಯ ಪರಿಷ್ಕರಣೆಯಾಗಿದೆ.

ಮಂಗಳೂರು – ಬೆಂಗಳೂರು ಮಧ್ಯೆ 90 ಕಿಲೋಮೀಟರ್ ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯಗೊಂಡ ಬಳಿಕ, ಈ ಮಾರ್ಗದಲ್ಲಿಯೂ ವಂದೇ ಭಾರತ್ ಎಕ್ಸ್‌ಪ್ರೆಸ್‌ ಓಡಾಟದ ನಡೆಸಲಿದೆ. ಮಂಗಳೂರು – ಗೋವಾ ನಡುವೆಯು ಈ ರೈಲು ಸಂಚರಿಸಲು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಒಪ್ಪಿಗೆ ನೀಡಿದ್ದಾರೆ’ ಎಂದು ನಳಿನ್ ಕುಮಾರ್ ಕಟೀಲ್ ಈ ಹಿಂದೆ ತಿಳಿಸಿದ್ದರು.

ಕರ್ನಾಟಕದಲ್ಲಿ ಈಗಾಗಲೇ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸುತ್ತಿವೆ. ಬೆಂಗಳೂರು – ಹುಬ್ಬಳ್ಳಿ – ಧಾರವಾಡ ನಡುವೆ ಓಡಾಡುವ ರೈಲು ಮಂಗಳವಾರ ಹೊರತುಪಡಿಸಿ, ಉಳಿದ ಎಲ್ಲ ದಿನಗಳಲ್ಲಿ ಕಾರ್ಯಚರಣೆ ನಡೆಸುತ್ತಿದೆ. ಮತ್ತೊಂದು ರೈಲು ಚೆನ್ನೈ – ಬೆಂಗಳೂರು – ಮೈಸೂರು ಮಾರ್ಗದಲ್ಲಿ ಸಂಚಾರ ಮಾಡುತ್ತಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ವಿಶೇಷತೆ ಏನು?

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದೇಶದ ರೈಲ್ವೆ ವಲಯದಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಈ ರೈಲುಗಳು ಸಾಮಾನ್ಯ ಎಕ್ಸ್‌ಪ್ರೆಸ್ ಗಳಿಗಿಂತ ಗರಿಷ್ಠ ವೇಗದಲ್ಲಿ ಸಂಚರಿಸುವುದರಿಂದ ನಿಗದಿತ ನಿಲ್ದಾಣವನ್ನು ಒಂದಷ್ಟು ಗಂಟೆ ಬೇಗನೇ ತಲುಪುತ್ತದೆ. ಸ್ವಯಂ ಚಾಲಿತ ಬಾಗಿಲು, ಸಂಪೂರ್ಣ ಎಸಿ ವ್ಯವಸ್ಥೆ ಹೊಂದುವ ಮೂಲಕ ಪ್ರೀಮಿಯಂ ರೈಲು ಎಂಬ ಹೆಗ್ಗಳಿಕೆಗೆ ವಂದೇ ಭಾರತ್ ಪಾತ್ರವಾಗಿವೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *