ಸೌಜನ್ಯಾ ಕೊಲೆ ಪ್ರಕರಣ; ನ್ಯಾಯಕ್ಕಾಗಿ ಆಗ್ರಹಿಸಿ ನಾಳೆ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ – ರದ್ದಾಗಿರುವ ವದಂತಿ ನಿರಾಕರಿಸಿದ ಮಹೇಶ್ ಶೆಟ್ಟಿ ತಿಮರೋಡಿ

ಸೌಜನ್ಯಾ ಕೊಲೆ ಪ್ರಕರಣ; ನ್ಯಾಯಕ್ಕಾಗಿ ಆಗ್ರಹಿಸಿ ನಾಳೆ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ – ರದ್ದಾಗಿರುವ ವದಂತಿ ನಿರಾಕರಿಸಿದ ಮಹೇಶ್ ಶೆಟ್ಟಿ ತಿಮರೋಡಿ

ನ್ಯೂಸ್ ಆ್ಯರೋ‌ : ಸುಮಾರು 11 ವರ್ಷಗಳ ಹಿಂದೆ ಅಮಾನುಷವಾಗಿ ಕೊಲೆಗೀಡಾದ ಸೌಜನ್ಯಾಗೆ ನ್ಯಾಯ ಸಿಗಬೇಕೆಂಬ ಕೂಗು ರಾಜ್ಯದ ಎಲ್ಲಡೆ ಕೇಳಿಬರುತ್ತಿದೆ. ಈ ಕಾರಣಕ್ಕಾಗಿ ನಾಳೆ (ಸೆಪ್ಟಂಬರ್ 3) ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು ಲಕ್ಷಾಂತರ ಮಂದಿ ಭಾಗವಹಿಸಿ ನ್ಯಾಯಕ್ಕಾಗಿ ಆಗ್ರಹಿಸಲಿದ್ದಾರೆ.

ಅಪಪ್ರಚಾರ
ಈ ಮಧ್ಯೆ ನಾಳೆಯ ಸಭೆ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ರದ್ದಾಗಿದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ, ಯಾವುದೇ ಕಾರಣಕ್ಕೂ ನಾಳೆಯ ಸಭೆ ರದ್ದಾಗಿಲ್ಲ. ಕೆಲವರು ಜನರ ದಾರಿ ತಪ್ಪಿಸಲು ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಲ್ಲರೂ ಆಗಮಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಯಾರೆಲ್ಲ ಭಾಗಿ?
ಸೌಜನ್ಯಾ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ನಡೆಯುವ ಈ ಪ್ರತಿಭಟನೆಯಲ್ಲಿ ಸ್ಥಳೀಯ ಒಕ್ಕಲಿಗ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಾಲಕೃಷ್ಣ, ಹಿಂದೂ ಸಂಘಟನೆಯ ನಾಯಕ ಪ್ರಮೋದ್ ಮುತಾಲಿಕ್ ಮತ್ತಿತರರು ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿದೆ. ಈ ಪ್ರಯುಕ್ತ ವಾಹನ ಜಾಥಾವನ್ನೂ ಆಯೋಜಿಸಲಾಗಿದೆ.

ವಾಹನ ಜಾಥಾದ ವಿವರ
ನಾರಾವಿ-ಬೆಳ್ತಂಗಡಿ ಬೆಳಗ್ಗೆ 9
ಕುತ್ತೂರು-ಬೆಳ್ತಂಗಡಿ ಬೆಳಗ್ಗೆ 9.10
ಸುಲ್ಕೇರಿ-ಬೆಳ್ತಂಗಡಿ ಬೆಳಗ್ಗೆ 9.15
ಪಿಲ್ಯ-ಬೆಳ್ತಂಗಡಿ ಬೆಳಗ್ಗೆ 9.20
ಅಳದಂಗಡಿ-ಬೆಳ್ತಂಗಡಿ ಬೆಳಗ್ಗೆ 9.30ಕ್ಕೆ ವಾಹನ ಜಾಥಾ ನಡೆಯಲಿದೆ.

ಕರಪತ್ರ
ಈ ಮಧ್ಯೆ ‘ಸೌಜನ್ಯಾ ಹತ್ಯಾ ಹೆಸರಿನಲ್ಲಿ ಧರ್ಮಸ್ಥಳದ ಹೆಸರನ್ನು ಎಳೆಯುತ್ತಿರುವುದು ಸರಿಯೇ?’ ಎಂಬ ಕರಪತ್ರವನ್ನು ಮನೆ ಮನೆಗೆ ಹಂಚಲಾಗುತ್ತಿದೆ. ಜೊತೆಗೆ ‘ಇದು ನಿರ್ಧಾರದ ಕಾಲ! ಧರ್ಮ ಜಾಗರಣದ ನಡೆಗೆ ಇದೇ ಸಕಾಲ’ ಎಂಬ ಪತ್ರವನ್ನೂ ವಿತರಿಸಲಾಗುತ್ತಿದೆ.

Related post

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ – ಚಾಮರಾಜನಗರ, ಹಾಸನ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೆಲುವಿನ ಖಾತೆ ತೆರೆದಿದೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರು ಒಂದು ಲಕ್ಷಕ್ಕೂ ಅಧಿಕ…
Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? – ದಕ್ಷಿಣ ಕನ್ನಡ, ಬೆಂ.ಗ್ರಾಮಾಂತರ ಉಡುಪಿಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು, ಆಡಳಿತಾರೂಢ ಬಿಜೆಪಿ ಪಕ್ಷ ಸರಳ ಬಹುಮತದ ಕೊರತೆ ಎದುರಿಸುವ ಆತಂಕಕ್ಕೆ ಸಿಲುಕಿದೆ. ಎಲ್ಲಾ ಮತಗಟ್ಟೆ ಸಮೀಕ್ಷೆಗಳನ್ನು…
ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಬಸುರಿಯು ನೆಲದ ಮೇಲೆ ನಡೆದುಕೊಂಡು ಹೋಗುವಾಗ ವಿಶೇಷ ಕಾಳಜಿ ವಹಿಸಬೇಕು. ಇನ್ನೂ ಸಂಬಳ ಪಡೆಯದವರು, ಇಂದು ಅವರು ಹಣಕ್ಕಾಗಿ ತುಂಬಾ ಚಿಂತೆ ಮಾಡಬಹುದು ಮತ್ತು ನಿಮ್ಮ ಸ್ನೇಹಿತರಿಂದ ಸಾಲವನ್ನು…

Leave a Reply

Your email address will not be published. Required fields are marked *