
Mangalore : ಖಾಸಗಿ ಕಾಲೇಜು ವಿದ್ಯಾರ್ಥಿಗಳಿಬ್ಬರ ಅಪಹರಣ – ಏಳು ಮಂದಿ ಆರೋಪಿಗಳ ಬಂಧನ
- ಕರಾವಳಿ
- August 26, 2023
- No Comment
- 651
ನ್ಯೂಸ್ ಆ್ಯರೋ : ಮಂಗಳೂರು ನಗರದ ಬಾವುಟಗುಡ್ಡೆ ಸೈಂಟ್ ಅಲೋಶಿಯಸ್ ಕಾಲೇಜಿನ ಬಳಿ ಶಾಮೀರ್ ಹಾಗೂ ಇಬ್ರಾಹಿಂ ಫಾಹೀಮ್ ಎಂಬವರನ್ನು ತಾಬೀಶ್ ಹಾಗೂ ಆತನ ಸಹಚರರು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಇಬ್ರಾಹಿಂ ತಾಬೀಶ್, ಅಬ್ದುಲ್ಲಾ ಹನ್ನಾನ್, ಮೊಹಮ್ಮದ್ ಶಕೀಫ್, ಮೊಹಮ್ಮದ್ ಶಾಯಿಕ್, ಯು.ಪಿ. ತನ್ವೀರ್, ಅಬ್ದುಲ್ ರಶೀದ್ ಮತ್ತು ಮನ್ಸೂರ್ ಎಂದು ಗುರುತಿಸಲಾಗಿದೆ.
ಅಪಹರಣಕ್ಕೆ ಒಳಗಾದ ಇಬ್ರಾಹಿಂ ಫಾಹೀಮ್ ನೀಡಿದ ದೂರಿನಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ನಂಬ್ರ 95/2023 ಕಲಂ 323, 324, 341, 363, 506 ಜೊತೆಗೆ 149 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಒಳಗೊಂಡ ಆರೋಪಿಗಳನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ತಕ್ಷಣ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಆದರೆ ಅಪಹರಣದ ಹಿಂದಿನ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.