ಉಡುಪಿ : ನೇತ್ರಜ್ಯೋತಿ ಕಾಲೇಜ್ ಟಾಯ್ಲೆಟ್ ನಲ್ಲಿ ವಿಡಿಯೋ ಪ್ರಕರಣ – ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಉಡುಪಿ : ನೇತ್ರಜ್ಯೋತಿ ಕಾಲೇಜ್ ಟಾಯ್ಲೆಟ್ ನಲ್ಲಿ ವಿಡಿಯೋ ಪ್ರಕರಣ – ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ನ್ಯೂಸ್ ಆ್ಯರೋ : ಉಡುಪಿ ನೇತ್ರಜ್ಯೋತಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿದ್ಯಾರ್ಥಿನಿಯರ ಚಿತ್ರೀಕರಣಕ್ಕೆ ಯತ್ನಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಆರೋಪಿಗಳಾಗಿದ್ದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು‌ ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವಕೀಲರಾದ ಅಸದುಲ್ಲಾ ಅವರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಶ್ಯಾಂ ಪ್ರಕಾಶ್ ವಿದ್ಯಾರ್ಥಿನಿಯರಿಗೆ ಷರತ್ತು ಬದ್ಧ ಜಾಮೀನು ನೀಡಿದರು.

ಪ್ರಕರಣವನ್ನು ಸಮಗ್ರ ತನಿಖೆಗೊಳಪಡಿಸುವಂತೆ ಹಾಗೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶುಕ್ರವಾರ ಬಿಜೆಪಿ ಉಡುಪಿಯಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿತ್ತು.

ಇನ್ನೂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಸಿಕ್ಕಿಬಿದ್ದಿದ್ದರು.

ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಮೂವರನ್ನು ಅಮಾನತು ಮಾಡಿದೆ. ಸದ್ಯ ಈ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ರಾಜಕೀಯ ಬಣ್ಣವೂ ಮೆತ್ತಿಕೊಂಡಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಹಿಂದೂ ವಿದ್ಯಾರ್ಥಿನಿಯ ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಅದನ್ನು ತಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು. ಇವರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ನೀಚ ಕೃತ್ಯ ಬೆಳಕಿಗೆ ಬಂದ ಬಳಿಕ ಮೂವರನ್ನು ಇತರೆ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು, ಹಿಂದೂ ಸಂಘಟನೆಗಳ ಎಂಟ್ರಿಯೂ ಆಗಿತ್ತು.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *