ಉಳ್ಳಾಲ : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯ ಮೃತದೇಹ ಪತ್ತೆ – ಸೂಸೈಡ್ ಪಾಯಿಂಟ್ ನಲ್ಲಿನ ಸಾಲು ಸಾಲು ಬಲಿಗೆ ಕೊನೆ ಎಂದು?

ಉಳ್ಳಾಲ : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯ ಮೃತದೇಹ ಪತ್ತೆ – ಸೂಸೈಡ್ ಪಾಯಿಂಟ್ ನಲ್ಲಿನ ಸಾಲು ಸಾಲು ಬಲಿಗೆ ಕೊನೆ ಎಂದು?

ನ್ಯೂಸ್ ಆ್ಯರೋ : ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ಸೇತುವೆಯಿಂದ ಇಂದು ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಮೂಲದ ವ್ಯಾಪಾರಿಯ ಮೃತದೇಹ ಸಂಜೆಯ ವೇಳೆಗೆ ಪತ್ತೆಯಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಭೈರಪುರ ಕಾರ್ತಿಕೆರೆ ಗೋಕುಲ್ ಫಾರ್ಮ್ ಮುಗುಲವಳ್ಳಿ ನಿವಾಸಿ ಶಂಕರೇಗೌಡ ಅವರ ಪುತ್ರ ಪ್ರಸನ್ನ ಬಿ.ಎಸ್. (37) ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿಯಾಗಿದ್ದಾರೆ.

ಇವರು ಚಲಾಯಿಸಿಕೊಂಡು ಬಂದಿದ್ದ ಕಾರಿನಲ್ಲಿ ಪತ್ತೆಯಾದ ಚಾಲನಾ ಪರವಾನಿಗೆಯ ಗುರುತು ಪತ್ತೆ ಹಚ್ಚಲಾಗಿತ್ತು. ಅಲ್ಲದೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿತ್ತು.

ಪ್ರಸನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರುಕಟ್ಟೆಗೆ ಕೊತ್ತಂಬರಿ ಸೊಪ್ಪು ತರುತ್ತಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಕೊತ್ತಂಬರಿ ಸೊಪ್ಪು ತಂದು ಮಾರುಕಟ್ಟೆಗೆ ಹಾಕಿ ಬಳಿಕ ತನ್ನ ಕಾರಿನಲ್ಲಿ ಹೊರಟಿದ್ದಾರೆ. ಮಂಗಳೂರಿಗೆ ಸಾಗುವ ರಾಷ್ಟ್ರೀಯ 66ರ ನೇತ್ರಾವತಿ ಸೇತುವೆ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನೀರಿಗೆ ಹಾರಿದ ಬಳಿಕ ತೇಲುತ್ತಾ ಹೋಗುವ ದೃಶ್ಯವನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾರ್ವಜನಿಕರು ಚಿತ್ರೀಕರಣ ಮಾಡಿದ್ದು, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆ ದೃಶ್ಯ ವೈರಲ್ ಆಗಿದೆ. ಸಂಜೆಯ ವೇಳೆಗೆ ಪ್ರಸನ್ನ ಅವರ ಮೃತದೇಹ ಪತ್ತೆಯಾಗಿದೆ. ಅವರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಉದ್ಯಮಿ ಸಿದ್ದಾರ್ಥ 2019ರಲ್ಲಿ ನೇತ್ರಾವತಿ ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸೇತುವೆಗೆ ತಡೆಬೇಲಿ ಅಳವಡಿಸಲು ಜನಪ್ರತಿನಿಧಿಗಳು ಮುಂದಾದರು. ಹಾಗೆಯೇ 2020ರಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆತ್ಮಹತ್ಯೆ ತಡೆಗಾಗಿ ತಡೆಬೇಲಿಯನ್ನು ಅಳವಡಿಸಲಾಗಿತ್ತು. ಆ ಬಳಿಕ ಆತ್ಮಹತ್ಯೆ ಪ್ರಕರಣಗಳಿಗೆ ತಡೆ ಬಿದ್ದಿತ್ತು.

ಸೋಮವಾರ ಚಿಕ್ಕಮಗಳೂರಿನ ವ್ಯಾಪಾರಿ ತನ್ನ ಕಾರನ್ನು ಸೇತುವೆ ಬಳಿ ನಿಲ್ಲಿಸಿ ತಡೆಬೇಲಿ ಇಲ್ಲದ, ಸೇತುವೆಯ ಸ್ಥಳದಲ್ಲೇ ನದಿಗೆ ಹಾರಿದ್ದು ನೇತ್ರಾವತಿ ಸೇತುವೆ ಮತ್ತೆ ಸುದ್ದಿಯಲ್ಲಿದೆ. ಆದರೆ ಮೃತ ಪ್ರಸನ್ನ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *