ಶರಣಾಗತಿ ನಕ್ಸಲರಿಗೆ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ; ಎಷ್ಟು ಹಣ ಸಿಗಲಿದೆ ಗೊತ್ತಾ?
ನ್ಯೂಸ್ ಆ್ಯರೋ: ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಬದಲಾಗಿ ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಶರಣಾಗರಾಗುತ್ತಿದ್ದಾರೆ. ಹೀಗಾಗಿ ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ, ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುಂತಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಳಿ (ರಾಯಚೂರು), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಇವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಸಂಜೆ ವೇಳೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಲಿದ್ದಾರೆ. ಇನ್ನು ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ.
ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು. ಆದ್ರೆ, ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.
ಈ ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ. ಸಾಕಷ್ಟು ಬೇಡಿಕೆಗಳನ್ನಿಟ್ಟುಕೊಂಡೇ ಶರಣಾಗುತ್ತಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಮೂರು ಕೆಟಗರಿ ಇದೆ.
- ಕೆಟಗರಿ ಎ: ನಮ್ಮ ರಾಜ್ಯದವರೇ ಆಗಿದ್ದು, ಆಕ್ಟಿವ್ ಆಗಿರುವಾಗ ಕೇಸ್ ಇದ್ದು ಶರಣಾಗತಿಯಾಗುತ್ತಿದ್ದರೆ 7.50 ಲಕ್ಷ ರೂ. ಹಣ ಸಿಗುತ್ತದೆ.
- ಕೆಟಗರಿ ಬಿ: ನಕ್ಸಲರು ಹೊರರಾಜ್ಯದವನಾಗಿದ್ದು, ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೆ 4 ಲಕ್ಷ ರೂ. ಪ್ಯಾಕೇಜ್ ಸಿಗುತ್ತದೆ.
- ಕೆಟಗರಿ ಸಿ: ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿ, ಪ್ರಕರಣಗಳು ಇದ್ದರೆ 2 ಲಕ್ಷ ರೂ. ಹಣವನ್ನು ಸರ್ಕಾರ ನೀಡಲಿದೆ.
ಇನ್ನು ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Leave a Comment