ಬಿಯರ್ ಪ್ರಿಯರಿಗೆ ಕಹಿ ಸುದ್ದಿ; ದರ ಏರಿಸಿ ಶಾಕ್‌ ಕೊಟ್ಟ ಸರ್ಕಾರ

Beer
Spread the love

ನ್ಯೂಸ್ ಆ್ಯರೋ: ಬಸ್​ ಟಿಕೆಟ್​ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್​ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬಜೆಟ್​ಗೆ ಮುನ್ನವೇ ಬಿಯರ್ ದರ ಏರಿಕೆ ಮಾಡಿದೆ.

ಪ್ರೀಮಿಯಂ ಮದ್ಯದ ಬಾಟಲ್​ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್​ನಲ್ಲಿನ ಅಲ್ಕೋಹಾಲ್​ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್​) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್​​ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬಿಯರ್​ ದರ ಪರಿಷ್ಕರಿಸಲು 2024ರ ಆಗಸ್ಟ್​ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರೀಮಿಯಂ ಬಿಯರ್​ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ​ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್​ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.

Leave a Comment

Leave a Reply

Your email address will not be published. Required fields are marked *

error: Content is protected !!