ರಾಜ್ಯಾದ್ಯಂತ 56 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಮೇಲೆ ಶಾಕ್
ನ್ಯೂಸ್ ಆ್ಯರೋ : ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು 56 ಕಡೆಗಳಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಭಾರೀ ಶಾಕ್ ನೀಡಿದ್ದಾರೆ.
11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರದ ತಹಶೀಲ್ದಾರ್ ವಿಜಣ್ಣ, ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್, ದಾವಣಗೆರೆ ಇಇ ಡಿ.ಹೆಚ್ ಉಮೇಶ್., ಎಎಇಇ ಪ್ರಭಾಕರ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮುಗಿಬಿದ್ದಿದ್ದಾರೆ.
ಬರೋಬ್ಬರಿ 100 ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿಗೆ ಇಳಿದಿದ್ದು, ನಿದ್ದೆಯಲ್ಲಿದ್ದವರ ಮನೆಗೆ ನುಗ್ಗಿ ನಿದ್ದೆ ಬಿಡಿಸಿದ್ದಾರೆ. ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಳಗಾವಿ, ಮಂಡ್ಯ, ದಾವಣಗೆರೆ, ಮೈಸೂರು ಸೇರಿ ಹಲವೆಡೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…
Leave a Comment