ಫೆಂಗಲ್ ಬೆನ್ನಲ್ಲೇ ಮತ್ತೊಂದು ಸೈಕ್ಲೋನ್ ಎಚ್ಚರಿಕೆ; ಕರ್ನಾಟಕದಲ್ಲಿ ಭಾರೀ ಮಳೆಯ ಸೂಚನೆ
ನ್ಯೂಸ್ ಆ್ಯರೋ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ವಾಯಭಾರ ಕುಸಿತ ಹಿನ್ನೆಲೆಯಲ್ಲಿ ಸೈಕ್ಲೋನ್ ಸೃಷ್ಟಿಯಾಗುವ ಆತಂಕ ಕೂಡ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪರಿಣಾಮ ಈಗಾಗಲೇ ತಮಿಳುನಾಡಿನ ಕಡಲೂರು ಜಿಲ್ಲೆ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಡಿಸೆಂಬರ್ 13, 14 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದ ಹಿಂದಷ್ಟೇ ಫೆಂಗಲ್ ಚಂಡಮಾರುತ ಭಾರೀ ಅನಾಹುತ ಮಾಡಿತ್ತು. ಇದೀಗ ಮತ್ತೆ ಹವಾಮಾನದಲ್ಲಿ ವೈಪರಿತ್ಯ ಸಂಭವಿಸಿದೆ. ಫೆಂಗಲ್ ಅನಾಹುತದಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದ್ದು, ರಾಜ್ಯದ ಜನರು ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Leave a Comment