ಅಪ್ಪಳಿಸಲಿದೆ ಮತ್ತೊಂದು ಚಂಡಮಾರುತ; ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ !
ನ್ಯೂಸ್ ಆ್ಯರೋ: ಬಂಗಾಳಕೊಲ್ಲಿ ಹಾಗೂ ಹಿಂದೂಮಹಾಸಾಗರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಚಂಡಮಾರುತ ಪರಿಚಲನೆ ಶುರುವಾಗಿದೆ. ಕರ್ನಾಟಕ, ತಮಿಳುನಾಡು, ಶ್ರೀಲಂಕಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಾದ್ಯಂತ ಡಿಸೆಂಬರ್ 13ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ವಿಜಯನಗರ, ಶಿವಮೊಗ್ಗ, ಕೋಲಾರ, ದಾವಣಗೆರೆ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆಗಳು ಕಟಾವಿಗೆ ಬಂದಿವೆ. ಮತ್ತೆ ವಾಯುಭಾರ ಕುಸಿತವಾದರೆ ಜೋರು ಮಳೆಯಾಗಿ ಬೆಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ರೈತರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
Leave a Comment