18 ತಿಂಗಳಲ್ಲಿ ಕರ್ನಾಟಕದ ಸಾಲ 82,000 ಕೋಟಿ ಏರಿಕೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ

Shobha
Spread the love

ನ್ಯೂಸ್ ಆ್ಯರೋ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 18 ತಿಂಗಳಲ್ಲಿ ಕರ್ನಾಟಕದ ಸಾಲ ₹82000 ಕೋಟಿ ಏರಿಕೆ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಮಹಾರಾಷ್ಟ್ರ ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಶೋಭಾ, ‘ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ಸಮಸ್ಯೆಗಳು ಉಂಟಾಗಿವೆ. ಈ ಯೋಜನೆಯಿಂದ ಸಾರಿಗೆ ಇಲಾಖೆಗೆ ಪ್ರತಿ ತಿಂಗಳು ಸುಮಾರು ₹100 ಕೋಟಿ ನಷ್ಟ ಉಂಟಾಗಿದೆ.

ಇದರಿಂದ ಇಂಧನ ನಿರ್ವಹಣೆ, ಸಿಬ್ಬಂದಿ ವೇತನಕ್ಕೆ ಹಣ ಕೊರತೆ ಎದು ಗೃಹಲಕ್ಷ್ಮೀ ಯೋಜನೆ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಟೀಕಿಸಿದ ಅವರು, ಹಣದ ಕೊರತೆಯಿಂದ ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮೀ ಹಣದ ಪಾವತಿಗಳನ್ನು ತಡೆಹಿಡಿಯಲಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಎಸ್‌ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಮೀಸಲಾದ ಹಣವನ್ನು ಬೇರೆ ಕೆಲಸಕ್ಕೆ ಬಳಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಮಹಾರಾಷ್ಟ್ರ ಆರ್ಥಿಕತೆ ಬಲವಾಗಿದ್ದು, ಕಾಂಗ್ರೆಸ್ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಇದೇ ರೀತಿ ಸಮಸ್ಯೆಗಳು ಎದುರಾಗುತ್ತವೆ ಎಂದು ಎಚ್ಚರಿಸಿದರು.

Leave a Comment

Leave a Reply

Your email address will not be published. Required fields are marked *

error: Content is protected !!