ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಇಂದಿನಿಂದ 2 ದಿನ ಭರ್ಜರಿ ಮಳೆ
ನ್ಯೂಸ್ ಆ್ಯರೋ: ಚಳಿಗಾಲ ಶುರುವಾಯ್ತು. ಇನ್ನೇನು ಮಳೆ ಕಾಟ ಮುಗಿದು ಹೋಯ್ತು. ಬೇಸಿಗೆ ಕಾಲ ಬಂದ ಮೇಲೆ ನೆಮ್ಮದಿ ಆಗಿರಬಹುದು ಎಂದು ಭಾವಿಸಿದ್ದ ರಾಜ್ಯದ ಜನತೆಗೆ ಕಹಿ ಸುದ್ದಿ ಒಂದಿದೆ. ಇಂದಿನಿಂದ ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಪದೇ ಪದೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ. ಹಾಗಾಗಿ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಲ್ಲೂ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಜನವರಿ 2 ಮತ್ತು 3ರ ರಂದು ಜೋರು ಮಳೆ ಬೀಳಲಿದೆ. ಇಂದು ಬೆಳಗ್ಗೆಯಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
Leave a Comment