ಕರ್ನಾಟಕ ವಿದ್ಯುತ್ ನಿಗಮದಲ್ಲಿ 2975 ಹುದ್ದೆಗಳಿಗೆ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ

KPTCL Recruitment 2024
Spread the love

ನ್ಯೂಸ್ ಆ್ಯರೋ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯು 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್​​ಸೈಟ್​​​ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ವಿದ್ಯಾರ್ಹತೆ 10ನೇ, 12ನೇ ತರಗತಿ ಪಾಸಾಗಿರಬೇಕು. ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ನವೆಂಬರ್-2024

ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-ಅಕ್ಟೋಬರ್-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-ನವೆಂಬರ್-2024 ಒಟ್ಟು ಹುದ್ದೆಗಳು 2975.
ಅರ್ಜಿ ಸಲ್ಲಿಸುವ ಬಗೆ ಆನ್​​ಲೈನ್.
ಉದ್ಯೋಗ ಸ್ಥಳ – ಕರ್ನಾಟಕ.
ವಿದ್ಯಾರ್ಹತೆ 10ನೇ, 12ನೇ, ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ನವೆಂಬರ್-2024

ಆಯ್ಕೆಯ ವಿಧಾನ ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ಕನ್ನಡ ಭಾಷಾ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ವಯೋಮಿತಿ,ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.

Leave a Comment

Leave a Reply

Your email address will not be published. Required fields are marked *

error: Content is protected !!