ಅಪ್ರಾಪ್ತ ಬಾಲಕಿ, ಇಬ್ಬರು ಸಹೋದರರಿಗೆ ಲೈಂಗಿಕ ಕಿರುಕುಳ – ಆರೋಪಿಗೆ 189 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ಬಾಲಕಿ, ಇಬ್ಬರು ಸಹೋದರರಿಗೆ ಲೈಂಗಿಕ ಕಿರುಕುಳ – ಆರೋಪಿಗೆ 189 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ನ್ಯೂಸ್ ಆ್ಯರೋ : ಅಪ್ರಾಪ್ತ ಬಾಲಕಿ ಸೇರಿದಂತೆ ಆಕೆಯ ಇಬ್ಬರು ಸೋದರರಿಗೂ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಹೊಸದುರ್ಗ ನ್ಯಾಯಾಲಯ 189 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅರಿಂಜಾಲ್‌ ನಿವಾಸಿ ಸುಧೀಶ್‌ ಅಲಿಯಾಸ್‌ ಪಪ್ಪು (25) ಎಂಬ ಆರೋಪಿಗೆ ನ್ಯಾಯಾಧೀಶರಾದ ಸಿ. ಸುರೇಶ್‌ ಕುಮಾರ್‌ 189 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಪೊಕ್ಸೊ ಪ್ರಕರಣ, ಲೈಂಗಿಕ ದೌರ್ಜನ್ಯ, ಅಪಹರಣ, ಬೆದರಿಕೆ ಸೇರಿದಂತೆ ಒಟ್ಟು 21 ಪ್ರಕರಣಗಳಲ್ಲಿ ಒಟ್ಟಾರೆ ಆರೋಪಿ 20 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಕಳೆದ ವರ್ಷ ಆರೋಪಿಯು ಏಳು ವರ್ಷದ ಬಾಲಕಿ ಹಾಗೂ ಆಕೆಯ 14 ವರ್ಷದ ಹಿರಿಯ ಸಹೋದರನಿಗೂ ಹಾಗೂ 2019ರಲ್ಲಿ ಇನ್ನೊಬ್ಬ ಸಹೋದರನಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಿಸಲಾಗಿತ್ತು.

ಬಾಲಕಿಯನ್ನು ಮನೆ ಸಮೀಪದ ಅರಣ್ಯ ಪ್ರದೇಶಕ್ಕೆ ಮತ್ತು ಪಂಪ್ ಹೌಸ್ ಗೆ ಕರೆದೊಯ್ದು ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದಕ್ಕಾಗಿ ಆತನಿಗೆ 74 ವರ್ಷಗಳ ಜೈಲುಶಿಕ್ಷೆ ಮತ್ತು 1.45 ಲಕ್ಷ ದಂಡ ವಿಧಿಸಲಾಗಿದೆ. ಇನ್ನು 12 ವರ್ಷದ ಒಳಗಿನ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ 20 ವರ್ಷಗಳ ಜೈಲು ಮತ್ತು ಪೊಕ್ಸೊ ಕಾಯ್ದೆಯಡಿ ತಲಾ 40 ಸಾವಿರ ದಂಡ ವಿಧಿಸಲಾಗಿದೆ. ಬಾಲಕಿಯ ಅಪಹರಣ ಮಾಡಿದ್ದಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಲಾಗಿದೆ.

ಅಪ್ರಾಪ್ತ ವಯಸ್ಕಳನ್ನುಮಾನವ ಸಾಗಣೆ ಮಾಡಿದ ಅಪರಾಧದಡಿ ಸೆಕ್ಷನ್ 370(4) ರ 10 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ ವಿಧಿಸಲಾಗಿದೆ. ಇನ್ನು ಇಬ್ಬರು ಬಾಲಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿ ವಿವಿಧ ಶಿಕ್ಷೆಗಳನ್ನು ವಿಧಿಸಲಾಗಿದ್ದು, ಒಟ್ಟು 189 ವರ್ಷಗಳ ಜೈಲುವಾಸ ಆಗುತ್ತದೆ. ಅಪರಾಧಿ ಈಗ ಕೇವಲ 20 ವರ್ಷಗಳ ಜೈಲುವಾಸ ಅನುಭವಿಸಬೇಕಾಗಿದೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *