ಗೂಂಡಾ ಕಾಯ್ದೆಯಡಿ ಬಂಧನಕ್ಕೂ ಮುನ್ನ ಅರ್ಥವಾಗುವ ಭಾಷೆಯಲ್ಲೇ ಅಪರಾಧಿಗೆ ಕಾರಣ ತಿಳಿಸಿ – ಹೈಕೋರ್ಟ್‌ ನಿಂದ ಹೊರಬಿತ್ತು ಮಹತ್ವದ ಆದೇಶ

ಗೂಂಡಾ ಕಾಯ್ದೆಯಡಿ ಬಂಧನಕ್ಕೂ ಮುನ್ನ ಅರ್ಥವಾಗುವ ಭಾಷೆಯಲ್ಲೇ ಅಪರಾಧಿಗೆ ಕಾರಣ ತಿಳಿಸಿ – ಹೈಕೋರ್ಟ್‌ ನಿಂದ ಹೊರಬಿತ್ತು ಮಹತ್ವದ ಆದೇಶ

ನ್ಯೂಸ್ ಆ್ಯರೋ : ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ವ್ಯಕ್ತಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಾಗ ಆತನಿಗೆ ಅರ್ಥವಾಗುವ ಭಾಷೆಯಲ್ಲೇ ಕಾರಣಗಳನ್ನು ವಿವರಿಸಬೇಕೆಂದು ಹೈಕೋರ್ಟ್ ಆದೇಶಿಸಿದೆ.

ಕೊಲೆ ಹಾಗೂ ದರೋಡೆ ಸೇರಿ ಹಲವು ಬಗೆಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಹುಚ್ಚಪ್ಪ ಅಲಿಯಾಸ್‌ ಧನರಾಜ್‌ ಕಾಳೇಬಾಗ್‌ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ ಆದೇಶ ರದ್ದು ಕೋರಿ ಆತನ ಪತ್ನಿ ಶ್ರೀನಿಕಾ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್‌ ನವಾಜ್‌ ಮತ್ತು ರಾಜೇಶ್‌ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಧನರಾಜ್‌ಗೆ ತಿಳಿಯದ ಭಾಷೆಯಲ್ಲಿ ದಾಖಲೆ ಒದಗಿಸದ ಹಿನ್ನೆಲೆಯಲ್ಲಿ ಬಂಧಿಸಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಆತನನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಆದೇಶಿಸಿದೆ.

ಕೊಲೆ, ಕೊಲೆ ಯತ್ನ, ದರೋಡೆ ಸೇರಿ ಹಲವು ಬಗೆಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಕಾರಣ ಕಾಳೇಭಾಗ್‌ನನ್ನು ಮುನ್ನೆಚ್ಚರಿಕೆ ಕ್ರಮವಾಗಿ ಗೂಂಡಾ ಕಾಯ್ದೆಯಡಿ 12 ತಿಂಗಳು ಬಂಧನದಲ್ಲಿಡಲು ವಿಜಯಪುರ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ಆದೇಶವನ್ನು ಸರ್ಕಾರ ಅನುಮೋದಿಸಿತ್ತು.

ಅದನ್ನು ಪ್ರಶ್ನಿಸಿದ್ದ ಕಾಳೇಭಾಗ್‌ ಪತ್ನಿ ಶ್ರೀನಿಕಾ, ಪತಿಯನ್ನು 12 ತಿಂಗಳು ಸೆರೆವಾಸದಲ್ಲಿ ಇಡಲು ಮಾಡಿರುವ ಆದೇಶ ಅಕ್ರಮ ಹಾಗೂ ಕಾನೂನುಬಾಹಿರ. ಗೂಂಡಾ ಕಾಯ್ದೆ ಸೆಕ್ಷನ್‌ 3(2)ರಡಿ ಮೊದಲಿಗೆ ಮೂರು ತಿಂಗಳು ಮಾತ್ರ ಬಂಧನ ಆದೇಶ ಹೊರಡಿಸಬಹುದು ಮತ್ತು ಆ ನಂತರ ಅಗತ್ಯಬಿದ್ದರೆ ಮೂರು ತಿಂಗಳು ವಿಸ್ತರಣೆ ಮಾಡಬಹುದು ಎಂದು ಆಕ್ಷೇಪಿಸಿದ್ದರು.

ಅಲ್ಲದೆ, ಗೂಂಡಾ ಕಾಯ್ದೆಯಡಿ ನಿಯಮಗಳಂತೆ ವ್ಯಕ್ತಿಯನ್ನು ಬಂಧಿಸಿದ ಕೂಡಲೇ 21 ದಿನಗಳಲ್ಲಿ ಆತನಿಗೆ ಏಕೆ ಬಂಧಿಸಲಾಗಿದೆ ಎಂಬ ವಿವರಗಳುಳ್ಳ ದಾಖಲೆಗಳನ್ನು ಆತನಿಗೆ ತಿಳಿದಿರುವ ಭಾಷೆಯಲ್ಲಿಯೇ ನೀಡಬೇಕಾಗಿದೆ. ಆದರೆ ಆ ರೀತಿ ದಾಖಲೆ ಒದಗಿಸದೆ ಬಂಧಿತನ ಹಕ್ಕು ಮೊಟಕುಗೊಳಿಸಲಾಗಿದೆ. ಆದ್ದರಿಂದ ಸರ್ಕಾರದ ಬಂಧನ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

ಅರ್ಜಿಯ ವಿವರಗಳನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರು ಕೇವಲ 3ನೇ ತರಗತಿವರೆಗೆ ಓದಿದ್ದಾರೆ. ಅವರಿಗೆ ಇಂಗ್ಲಿಷ್‌ ತಿಳಿದಿಲ್ಲ. ಅಂತಹ ಸಂದರ್ಭದಲ್ಲಿ ಬಂಧಿಸಿದ ಅಧಿಕಾರಿಗಳು ಆತನಿಗೆ ತಿಳಿದಿರುವ ಭಾಷೆಯಲ್ಲೇ ದಾಖಲೆಗಳನ್ನು ಒದಗಿಸಬೇಕಾದ್ದು ಆದ್ಯ ಕರ್ತವ್ಯ. ಹಾಗೆ ದಾಖಲೆ ಒದಗಿಸಿದರೆ ಆ ವ್ಯಕ್ತಿ ಸರ್ಕಾರದ ಸಲಹಾ ಮಂಡಳಿಯ ಮುಂದೆ ಒಂದು ಅವಕಾಶವನ್ನು ಕೋರಬಹುದಾಗಿದೆ. ಈ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗೆ ಗೂಂಡಾ ಕಾಯ್ದೆ ಸೆಕ್ಷನ್‌ 3(3) ರ ಅನ್ವಯ 21 ದಿನಗಳಲ್ಲಿ ಆತನಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆ ಒದಗಿಸಲು ಬಂಧಿತ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಭಿಪ್ರಾಯಪಟ್ಟು ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *